ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 2 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 19 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಡಿಸೆಂಬರ್ 2027
ಗುರುವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Prophet Obadiah (9th C BC)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. 2ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. 3“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. 4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. 5ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. 7ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. 8ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
ಸುವಾರ್ತೆ
1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, 2ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು. 3ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. 4ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು, 5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು, 6ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು. 7ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು. 8ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. 9“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 2 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು