ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 3 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಡಿಸೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 24ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Forefeast of the Entry of the Theotokos
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
9ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು. 10ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು. 11ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ. 12ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ, 13ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ. 24ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು. 25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ. 26ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ. 27ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ. 28ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
ಪತ್ರಿಕೆ (ಶನಿವಾರಕ್ಕೆ)
1ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ. 2ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ. 3ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ. 4ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ. 5“ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ 6ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.
ಸುವಾರ್ತೆ
15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. 16“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. 17ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ. 18“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ. 17:1ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? 2ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು. 3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. 4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
ಸುವಾರ್ತೆ (ಶನಿವಾರಕ್ಕೆ)
57ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, 58ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. 59ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು. 60ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು. 61ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು. 62ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 3 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು