ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 4 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಡಿಸೆಂಬರ್ 2027
ಶನಿವಾರ · ಆಗಮನ ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಮೊದಲನೆಯ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ
ದಮಸ್ಕದ ಸಂತ ಯೋಹಾನ, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. 20ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ. 21ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. 23ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು. 24ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು. 25ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು. 26ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ. 2ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ, 3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ. 4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ. 5ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ. 6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
ಸುವಾರ್ತೆ
35ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. 36ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು. 37ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ. 38ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು. 10:1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ಇಂದಿನ ಸಂತರು
- ದಮಸ್ಕದ ಸಂತ ಯೋಹಾನ, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು