ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 5 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಡಿಸೆಂಬರ್ 2027
ಭಾನುವಾರ · ಆಗಮನ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಎರಡನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಎರಡನೆಯ ವಾಚನ
3ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ. 5ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. 6ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು. 8ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. 9ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, 11ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
ಸುವಾರ್ತೆ
1ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ 2ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು. 3ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು. 4ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು