Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 5 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 22 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಡಿಸೆಂಬರ್ 2027

ಭಾನುವಾರ · ಸ್ವರ 7

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 24ನೇ ಭಾನುವಾರ

ಕ್ರಿಸ್ತ ಜನನದ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಎರಡನೆಯ ಸುವಾರ್ತೆ

ಮಾರ್ಕ 16:1–8

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಪತ್ರಿಕೆ

ಎಫೆ 2:14–22

14ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ. 15ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ. 16ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. 17ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. 18ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು. 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. 21ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.

ಸುವಾರ್ತೆ

ಲೂಕ 12:16–21

16ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. 17ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ, 18‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, 19ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. 20“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. 21ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 5 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು