ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 7 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಡಿಸೆಂಬರ್ 2027
ಮಂಗಳವಾರ · ಆಗಮನ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಎರಡನೆಯ ವಾರದ ಮಂಗಳವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತ ಆಂಬ್ರೋಸ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ. 2ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ. 3ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ” 4ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು. 5ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. 6ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ. 7ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು! 8ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು. 9ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು! 10ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ. 11ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. 2ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 3ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. 10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 11ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. 13ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ಸುವಾರ್ತೆ
12“ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? 13ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
ಇಂದಿನ ಸಂತರು
- ಸಂತ ಆಂಬ್ರೋಸ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು