ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 9 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಡಿಸೆಂಬರ್ 2027
ಗುರುವಾರ · ಆಗಮನ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಆಗಮನ ಕಾಲದ ಎರಡನೆಯ ವಾರದ ಗುರುವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ
ಸಂತ ಹುವಾನ್ ಡಿಯೆಗೊ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
13ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ. 14ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ. 15“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ. 16ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ. 17ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. 18ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು. 19ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. 20ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು. 9ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ. 10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. 11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು. 12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. 13ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
ಸುವಾರ್ತೆ
11ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. 13ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. 14ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. 15ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
ಇಂದಿನ ಸಂತರು
- ಸಂತ ಹುವಾನ್ ಡಿಯೆಗೊ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು