ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 9 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಡಿಸೆಂಬರ್ 2027
ಗುರುವಾರ · ಪಂಚಾಶತ್ತಮದ ನಂತರದ 25ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Venerable Alypios the Stylite of Adrianopolis († 640)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ. 14ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು. 15ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ. 16ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, 17ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ. 3:1ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, 2ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ. 3ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು. 4ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು. 5ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
ಸುವಾರ್ತೆ
31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. 32ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, 33ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. 34ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 9 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು