Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 10 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ನವೆಂಬರ್ 27 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಡಿಸೆಂಬರ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 25ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Icons of the Mother of God: “Znamenie” of Novgorod and “Znamenie”, the Kursk-Root

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಥೆಸ 3:6–18

6ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. 7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ. 8ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು. 9ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು. 10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. 11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. 12ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. 13ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. 14ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. 15ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ. 16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. 17ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. 18ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.

ಸುವಾರ್ತೆ

ಲೂಕ 19:12–28

12ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು. 13ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು. 14ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು. 15ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು. 16ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು, 17ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. 18ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು, 19ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. 20ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು. 22ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ? 23ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ, 24ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು. 25ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು. 26ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ 27ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು. 28ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ನವೆಂಬರ್ ಎಂದರೆ ನಾಗರಿಕ ಪಂಚಾಂಗದ 10 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು