Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 11 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಡಿಸೆಂಬರ್ 2027

ಶನಿವಾರ · ಆಗಮನ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಎರಡನೆಯ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ

ಸಂತ ದಮಾಸಸ್ I, ಪೋಪ್ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 80:1–2, 14–15, 17–18

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ. ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. 2ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. 14ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು. 15ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. 17ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು. 18ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.

ಸುವಾರ್ತೆ

ಮತ್ತಾ 17:10–13

10ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು. 11ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು. 12ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು. 13ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು