Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 12 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಡಿಸೆಂಬರ್ 2027

ಭಾನುವಾರ · ಆಗಮನ ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಮೂರನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಗುಲಾಬಿ

ದಿನದ ವಾಚನಗಳು

ಮೊದಲನೆಯ ವಾಚನ

ಚೆಫ 3:14–17

14ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು! 15ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ. 16ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ; 17ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.

ಪ್ರತಿವಚನ ಕೀರ್ತನೆ

ಯೆಶಾ 12:2–6

2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಎರಡನೆಯ ವಾಚನ

ಫಿಲಿಪ್ಪಿ 4:4–7

4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. 5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ. 6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. 7ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ಸುವಾರ್ತೆ

ಲೂಕ 3:10–18

10ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ, 11ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು. 12ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು, 13ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು. 14ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು. 15ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು, 16ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು. 17ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. 18ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು