Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 13 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಡಿಸೆಂಬರ್ 2027

ಸೋಮವಾರ · ಆಗಮನ ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ಆಗಮನ ಕಾಲದ ಮೂರನೆಯ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಕೆಂಪು

ಸಂತ ಲೂಸಿ, ಕನ್ಯೆ ಮತ್ತು ಹುತಾತ್ಮ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಅರಣ್ಯ 24:2–7, 15–17

2ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ, 3ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು. 4ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು. 5ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ. 6ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ. 7ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು. 15ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು. 16ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು. 17ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

ಪ್ರತಿವಚನ ಕೀರ್ತನೆ

ಕೀರ್ತ 25:4–9

4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. 7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. 8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.

ಸುವಾರ್ತೆ

ಮತ್ತಾ 21:23–27

23ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು. 24ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 25ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು; 26‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 27ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು