Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 14 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 1 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಡಿಸೆಂಬರ್ 2027

ಮಂಗಳವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Prophet Naum (7th C BC)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ತಿಮೊ 1:8–14

8ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. 9ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, 10ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. 11ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. 12ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 14ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

ಸುವಾರ್ತೆ

ಲೂಕ 19:45–48

45ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ, 46“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು. 47ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. 48ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 14 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು