Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 15 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಡಿಸೆಂಬರ್ 2027

ಬುಧವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Prophet Habakuk (7th C BC)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ತಿಮೊ 1:18–20; 2:8–15

18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ. 19ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ. 20ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. 2:8ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ. 9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ 10ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು. 11ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು. 12ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು. 13ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು. 14ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು. 15ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.

ಸುವಾರ್ತೆ

ಲೂಕ 20:1–8

1ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು, 2“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು, 3ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ. 4ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. 5ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು, 6ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, 7ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು. 8ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 15 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು