Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 16 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 3 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಡಿಸೆಂಬರ್ 2027

ಗುರುವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Prophet Sophonius († 635-605 BC)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ತಿಮೊ 3:1–13

1ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ. 2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು. 3ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. 4ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು. 5ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು? 6ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು. 7ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. 8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ, 9ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು. 10ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ. 11ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು. 12ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು. 13ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

ಸುವಾರ್ತೆ

ಲೂಕ 20:9–18

9ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. 10ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು. 11ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು. 12ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು. 13ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು. 14ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು, 15ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು? 16ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು. 17ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು? 18“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 16 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು