ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 17 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಡಿಸೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Great Martyr Barbara and Martyr Juliana, at Heliopolis in Syria († c. 306)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
4ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. 5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ. 6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. 7ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ. 8ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು. 16ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ಪತ್ರಿಕೆ (ಶನಿವಾರಕ್ಕೆ)
8ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. 9ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. 10ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ. 11ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ. 12ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
ಸುವಾರ್ತೆ
19ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು. 20ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು. 21ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. 22ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು. 23ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು, 24ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. 25ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. 26ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
ಸುವಾರ್ತೆ (ಶನಿವಾರಕ್ಕೆ)
32ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. 33ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. 34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ. 35“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. 37ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು. 39ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. 40ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 17 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು