Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 18 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಡಿಸೆಂಬರ್ 2027

ಶನಿವಾರ · ಪಂಚಾಶತ್ತಮದ ನಂತರದ 26ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Venerable Sabbas the Sanctified († 532)

ಕ್ರಿಸ್ತ ಜನನದ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ಪತ್ರಿಕೆ (ಸಂತ ಸಬ್ಬಾಸ್)

ಗಲಾ 5:22–6:2

22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.

ಸುವಾರ್ತೆ (ಸಂತ ಸಬ್ಬಾಸ್)

ಮತ್ತಾ 11:27–30

27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 18 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು