ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 21 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 8 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಡಿಸೆಂಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Venerable Patapios of Thebes (7th C)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
11ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು. 12ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು. 13ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ. 14ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು. 15ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. 16ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. 17ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. 18“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ. 19ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. 20ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. 21ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.
ಸುವಾರ್ತೆ
12ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. 13ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. 14ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. 15ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. 16ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. 17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. 18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. 19ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 21 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು