Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 22 ಡಿಸೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಡಿಸೆಂಬರ್ 2027

ಬುಧವಾರ · ಆಗಮನ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಡಿಸೆಂಬರ್ 22

ವಾರದ ದಿನ · ಆರಾಧನಾ ಬಣ್ಣ: ನೇರಳೆ

ದಿನದ ವಾಚನಗಳು

ಮೊದಲನೆಯ ವಾಚನ

1 ಸಮು 1:24–28

24ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು. 25ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು. 26ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ. 27ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; 28ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.

ಪ್ರತಿವಚನ ಕೀರ್ತನೆ

1 ಸಮು 2:1, 4–8

1ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ. 4“ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ. 5ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು. 6“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. 7ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ. 8ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

ಸುವಾರ್ತೆ

ಲೂಕ 1:46–56

46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 50ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು. 51ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ. 52ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ. 53ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. 54ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು