Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 24 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 11 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಡಿಸೆಂಬರ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 27ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Venerable Daniel the “Stylite” [Pillar-Dweller] of Constantinople († 489-490)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ತಿಮೊ 1:1–2, 8–18

1ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು, 2ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. 8ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. 9ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, 10ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. 11ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. 12ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. 13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. 14ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ. 15ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. 16ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ, 17ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು. 18ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ಸುವಾರ್ತೆ

ಲೂಕ 21:37–22:8

37ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು. 38ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. 22:1ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ, 2ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು. 3ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು, 4ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು. 5ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು, 6ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು. 7ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ, 8ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 24 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು