ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 27 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ಡಿಸೆಂಬರ್ 2027
ಸೋಮವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಸಂತ ಯೋಹಾನ, ಅಪೊಸ್ತಲ ಮತ್ತು ಸುವಾರ್ತಿಕ
ಹಬ್ಬ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
1ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು. 2ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. 3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ. 4ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.
ಪ್ರತಿವಚನ ಕೀರ್ತನೆ
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. 5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. 12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
ಸುವಾರ್ತೆ
2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು 3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. 4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು. 5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. 6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ 7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. 8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
ಇಂದಿನ ಸಂತರು
- ಸಂತ ಯೋಹಾನ, ಅಪೊಸ್ತಲ ಮತ್ತು ಸುವಾರ್ತಿಕ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು