ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 27 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 14 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಡಿಸೆಂಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Martyrs Thyrsos, Leukios, Callinicos of Apollonia († 249-251)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. 21ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು. 22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 23ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. 24ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ 25ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. 26ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.
ಸುವಾರ್ತೆ
11ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು. 12ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು. 13ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು. 14ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ. 15ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು. 16ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು. 17ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ? 18ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ? 19ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು. 20“ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು. 21ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 27 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು