ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 28 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಡಿಸೆಂಬರ್ 2027
ಮಂಗಳವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಪವಿತ್ರ ಮುಗ್ಧ ಕೂಸುಗಳು, ಹುತಾತ್ಮರು
ಹಬ್ಬ · ಆರಾಧನಾ ಬಣ್ಣ: ಕೆಂಪು
ದಿನದ ವಾಚನಗಳು
ಮೊದಲನೆಯ ವಾಚನ
5ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ. 6ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. 7ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ. 8ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. 9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. 10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ. 2:1ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
ಪ್ರತಿವಚನ ಕೀರ್ತನೆ
2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಸುವಾರ್ತೆ
13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. 14ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು. 15ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. 16ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. 17ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, 18“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.
ಇಂದಿನ ಸಂತರು
- ಪವಿತ್ರ ಮುಗ್ಧ ಕೂಸುಗಳು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು