Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 28 ಡಿಸೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಡಿಸೆಂಬರ್ 2027

ಮಂಗಳವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Hieromartyr Eleutherius, Bishop of Illyria, and his mother Martyr Anthea and Martyr Corivus the Eparch (2nd C)

ಕ್ರಿಸ್ತ ಜನನದ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ತಿಮೊ 3:16–4:4

16ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. 17ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು. 4:1ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, 2ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. 3ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. 4ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.

ಸುವಾರ್ತೆ

ಮಾರ್ಕ 8:22–26

22ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. 23ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು. 24ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು. 25ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. 26ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 28 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು