ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 30 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಡಿಸೆಂಬರ್ 2027
ಗುರುವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಡಿಸೆಂಬರ್ 30 — ಕ್ರಿಸ್ಮಸ್ ಅಷ್ಟದಿನದ ಆರನೆಯ ದಿನ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
12ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. 13ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. 14ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ. 15ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. 16ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. 17ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
ಪ್ರತಿವಚನ ಕೀರ್ತನೆ
7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. 8ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. 9ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. 10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
ಸುವಾರ್ತೆ
36ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು, 37ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು. 38ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು. 39ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. 40ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು