ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 30 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಡಿಸೆಂಬರ್ 2027
ಗುರುವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Prophet Daniel and the Three Holy Youths, Ananias, Azarias, and Misael (c 600 BC)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
5ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. 6ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. 7ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು, 9ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. 10ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ. 11ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. 12“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. 13ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ, 14ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. 15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. 16ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ. 2:1ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
ಪತ್ರಿಕೆ (ಪ್ರವಾದಿ ದಾನಿಯೇಲ ಮತ್ತು ಮೂವರು ಯುವಕರು)
33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., 34ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. 36ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. 37ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. 38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. 39ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. 40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು. 12:1ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ಸುವಾರ್ತೆ
10ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 11ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು. 12ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ? 13ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. 14ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು. 15ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು. 16ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 30 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು