ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 31 ಡಿಸೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 31 ಡಿಸೆಂಬರ್ 2027
ಶುಕ್ರವಾರ · ಕ್ರಿಸ್ಮಸ್ ಕಾಲ
ಹಬ್ಬಗಳು ಮತ್ತು ಸಂತರು
ಡಿಸೆಂಬರ್ 31 — ಕ್ರಿಸ್ಮಸ್ ಅಷ್ಟದಿನದ ಏಳನೆಯ ದಿನ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತ ಸಿಲ್ವೆಸ್ಟರ್ I, ಪೋಪ್ · ಸ್ಮರಣೋಲ್ಲೇಖ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
18ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ. 19ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ. 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ. 21ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. 2ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 11ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. 13ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ಸುವಾರ್ತೆ
1ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. 15ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. 16ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. 18ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಇಂದಿನ ಸಂತರು
- ಸಂತ ಸಿಲ್ವೆಸ್ಟರ್ I, ಪೋಪ್
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ C, ವಾರದ ದಿನಗಳ ವರ್ಷ II.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು