ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಡಿಸೆಂಬರ್ 2027 › 31 ಡಿಸೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಡಿಸೆಂಬರ್ 18 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಡಿಸೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 28ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Martyr Sebastian at Rome with his companions: Martyrs Nicostratus, his wife Zoe, Castorius, Tranquillinus the Presbyter and his sons the Deacons Marcellinus and Mark, Claudius, his son Symphorian and brother Victorinus, Tiburtius and Castulus († c. 287)
ಕ್ರಿಸ್ತ ಜನನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. 16ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ. 2:1ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. 2ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. 3ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. 4ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ 5ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು. 6ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು. 7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು; 8ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು. 9ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ, 10ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
ಸುವಾರ್ತೆ
33ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. 34ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. 35ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ, 36ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, 37“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. 38ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು. 39ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. 40ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ. 41ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಡಿಸೆಂಬರ್ ಎಂದರೆ ನಾಗರಿಕ ಪಂಚಾಂಗದ 31 ಡಿಸೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು