ದೈನಂದಿನ ಜೀವನ
ಬೈಬಲಿನಲ್ಲಿ ಕೋಪ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 41 ವಾಕ್ಯಭಾಗಗಳು, ಸಾಲು ಸಾಲಾಗಿ.
ನುಡಿಗಳು
- ಮೃದುವಾದ ಉತ್ತರವು ಕೋಪವನ್ನು ತಣಿಸುತ್ತದೆ; ಕಠಿಣವಾದ ಮಾತು ಕೋಪವನ್ನು ಕೆರಳಿಸುತ್ತದೆಜ್ಞಾನೋ 15:1
ವಚನಗಳು
ಜ್ಞಾನೋ 15:1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
- ದೀರ್ಘಶಾಂತನು ಶೂರನಿಗಿಂತ ಶ್ರೇಷ್ಠನುಜ್ಞಾನೋ 16:32, ಜ್ಞಾನೋ 14:29
ವಚನಗಳು
ಜ್ಞಾನೋ 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಜ್ಞಾನೋ 14:29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
- ಆತ್ಮನಿಗ್ರಹವಿಲ್ಲದವನು ಗೋಡೆ ಬಿದ್ದುಹೋದ ಪಟ್ಟಣದಂತಿದ್ದಾನೆಜ್ಞಾನೋ 25:28
ವಚನಗಳು
ಜ್ಞಾನೋ 25:28ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.
- ಮೂಢನು ತನ್ನ ಕೋಪವನ್ನೆಲ್ಲಾ ಹೊರಗೆಡಹುತ್ತಾನೆ; ಜ್ಞಾನಿಯು ಅದನ್ನು ತಡೆಹಿಡಿಯುತ್ತಾನೆಜ್ಞಾನೋ 29:11
ವಚನಗಳು
ಜ್ಞಾನೋ 29:11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
- ಹಾಲನ್ನು ಕಡೆದರೆ ಬೆಣ್ಣೆ ಬರುವಂತೆ, ಕೋಪವನ್ನು ಕೆರಳಿಸಿದರೆ ಜಗಳ ಹುಟ್ಟುತ್ತದೆಜ್ಞಾನೋ 30:33
ವಚನಗಳು
ಜ್ಞಾನೋ 30:33ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.
- ಕೋಪವು ಮೂಢನ ಎದೆಯಲ್ಲಿ ನೆಲೆಸುತ್ತದೆಪ್ರಸ 7:9
ವಚನಗಳು
ಪ್ರಸ 7:9ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
- ಕೋಪವನ್ನು ಬಿಡು; ಅದು ಕೇಡನ್ನೇ ತರುತ್ತದೆಕೀರ್ತ 37:8
ವಚನಗಳು
ಕೀರ್ತ 37:8ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
- ಸೂರ್ಯನು ಮುಳುಗುವವರೆಗೂ ನಿಮ್ಮ ಕೋಪವು ಇರಬಾರದುಎಫೆ 4:26
ವಚನಗಳು
ಎಫೆ 4:26“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
- ಕೇಳುವುದರಲ್ಲಿ ಚುರುಕು, ಮಾತಾಡುವುದರಲ್ಲಿ ನಿಧಾನ, ಕೋಪಿಸುವುದರಲ್ಲಿ ನಿಧಾನಯಾಕೋ 1:19–20
ವಚನಗಳು
ಯಾಕೋ 1:19–20ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಉದಾಹರಣೆಗಳು
- ಕಾಯಿನನು ಬಹಳ ಕೋಪಗೊಂಡು ತನ್ನ ತಮ್ಮನಾದ ಹೇಬೆಲನನ್ನು ಕೊಲ್ಲುತ್ತಾನೆಆದಿ 4:5–8
ವಚನಗಳು
ಆದಿ 4:5–8ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು. ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
- ಯಾಕೋಬನು ರಾಹೇಲಳಿಗೆ: “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ”ಆದಿ 30:2
ವಚನಗಳು
ಆದಿ 30:2ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.
- ಯಾಕೋಬನು ಸಿಟ್ಟುಗೊಂಡು ಲಾಬಾನನೊಂದಿಗೆ ವಾದಿಸುತ್ತಾನೆಆದಿ 31:36
ವಚನಗಳು
ಆದಿ 31:36ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?
- ಯಾಕೋಬನು: ಸಿಮೆಯೋನನೂ ಲೇವಿಯೂ “ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು”ಆದಿ 49:5–7
ವಚನಗಳು
ಆದಿ 49:5–7ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು. ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
- ಯೋಸೇಫನ ಯಜಮಾನನು ತನ್ನ ಹೆಂಡತಿಯ ಮಾತನ್ನು ಕೇಳಿ ಕೋಪದಿಂದ ಉರಿಯುತ್ತಾನೆಆದಿ 39:19
ವಚನಗಳು
ಆದಿ 39:19ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.
- ಫರೋಹನು ಮೋಶೆಗೆ: “ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು”ವಿಮೋ 10:28
ವಚನಗಳು
ವಿಮೋ 10:28ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.
- ಉಗ್ರಕೋಪದಿಂದ ಮೋಶೆಯು ಫರೋಹನ ಬಳಿಯಿಂದ ಹೊರಟುಹೋಗುತ್ತಾನೆವಿಮೋ 11:8
ವಚನಗಳು
ವಿಮೋ 11:8ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
- ಬಸವನನ್ನು ಕಂಡು ಮೋಶೆಯು ಹಲಗೆಗಳನ್ನು ಒಡೆದುಹಾಕುತ್ತಾನೆವಿಮೋ 32:19
ವಚನಗಳು
ವಿಮೋ 32:19ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
- ಮೋಶೆಯು ಬಂಡೆಯನ್ನು ಎರಡು ಸಾರಿ ಹೊಡೆಯುತ್ತಾನೆಅರಣ್ಯ 20:10–11
ವಚನಗಳು
ಅರಣ್ಯ 20:10–11ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?” ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
- ಬಿಳಾಮನು ತನ್ನ ಕತ್ತೆಯನ್ನು ಹೊಡೆಯುತ್ತಾನೆ, ಆಗ ಅದು ಮಾತನಾಡುತ್ತದೆಅರಣ್ಯ 22:27–29
ವಚನಗಳು
ಅರಣ್ಯ 22:27–29ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು. ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು. ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.
- ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಕೈಗಳನ್ನು ಬಡಿಯುತ್ತಾನೆಅರಣ್ಯ 24:10
ವಚನಗಳು
ಅರಣ್ಯ 24:10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
- ಗಿದ್ಯೋನನು ಕೋಪಗೊಂಡ ಎಫ್ರಾಯೀಮ್ಯರನ್ನು ಮೃದುವಾದ ಉತ್ತರದಿಂದ ಶಾಂತಗೊಳಿಸುತ್ತಾನೆನ್ಯಾಯ 8:1–3
ವಚನಗಳು
ನ್ಯಾಯ 8:1–3ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು. ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ? ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
- ಎಲೀಯಾಬನು ತನ್ನ ಚಿಕ್ಕ ತಮ್ಮನಾದ ದಾವೀದನ ಮೇಲೆ ಕೋಪಗೊಳ್ಳುತ್ತಾನೆ1 ಸಮು 17:28
ವಚನಗಳು
1 ಸಮು 17:28ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.
- ಸೌಲನು ತನ್ನ ಮಗನಾದ ಯೋನಾತಾನನ ಮೇಲೆ ಈಟಿಯನ್ನು ಎಸೆಯುತ್ತಾನೆ1 ಸಮು 20:30–34
ವಚನಗಳು
1 ಸಮು 20:30–34ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು. ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು. ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು. ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
- ಐಶ್ವರ್ಯವಂತನ ಬಗ್ಗೆ ನಾತಾನನು ಹೇಳಿದ ಕಥೆಯನ್ನು ಕೇಳಿ ದಾವೀದನು ಕೋಪದಿಂದ ಉರಿಯುತ್ತಾನೆ2 ಸಮು 12:5
ವಚನಗಳು
2 ಸಮು 12:5ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
- ಅಹಾಬನು ಸಿಡುಕಿನಿಂದಲೂ ಕೋಪದಿಂದಲೂ ಊಟಮಾಡಲು ನಿರಾಕರಿಸುತ್ತಾನೆ1 ಅರಸು 21:4
ವಚನಗಳು
1 ಅರಸು 21:4“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
- ನಾಮಾನನು: ದಮಸ್ಕದ ನದಿಗಳು ಯೊರ್ದನಿಗಿಂತ ಉತ್ತಮವಲ್ಲವೋ?2 ಅರಸು 5:11–12
ವಚನಗಳು
2 ಅರಸು 5:11–12ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು. ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.
- ಆಸನು ಒಬ್ಬ ದರ್ಶಿಯನ್ನು ಸೆರೆಮನೆಗೆ ಹಾಕುತ್ತಾನೆ2 ಪೂರ್ವ 16:10
ವಚನಗಳು
2 ಪೂರ್ವ 16:10ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
- ಉಜ್ಜೀಯನು ಧೂಪಾರತಿಯನ್ನು ಕೈಯಲ್ಲಿ ಹಿಡಿದು ಯಾಜಕರ ಮೇಲೆ ರೌದ್ರಗೊಳ್ಳುತ್ತಾನೆ2 ಪೂರ್ವ 26:19
ವಚನಗಳು
2 ಪೂರ್ವ 26:19ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
- ರಾಣಿಯಾದ ವಷ್ಟಿಯು ಬರಲು ಒಪ್ಪದಿದ್ದಾಗ ಅಹಷ್ವೇರೋಷನು ಕೋಪದಿಂದ ಉರಿಯುತ್ತಾನೆಎಸ್ತೇ 1:12
ವಚನಗಳು
ಎಸ್ತೇ 1:12ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
- ಮೊರ್ದೆಕೈ ತಲೆಬಾಗದಿದ್ದಾಗ ಹಾಮಾನನು ರೋಷದಿಂದ ತುಂಬಿಕೊಳ್ಳುತ್ತಾನೆಎಸ್ತೇ 3:5
ವಚನಗಳು
ಎಸ್ತೇ 3:5ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
- ಎಲೀಹುವು ಯೋಬನ ಮೇಲೆಯೂ ಅವನ ಮೂವರು ಮಿತ್ರರ ಮೇಲೆಯೂ ಕೋಪದಿಂದ ಉರಿಯುತ್ತಾನೆಯೋಬ 32:2–3
ವಚನಗಳು
ಯೋಬ 32:2–3ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು. ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
- ನೆಬೂಕದ್ನೆಚ್ಚರನು ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸುತ್ತಾನೆದಾನಿ 3:13, ದಾನಿ 3:19
- ಒಣಗಿದ ಸೋರೆಗಿಡದ ಬಗ್ಗೆ ಯೋನನು: “ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ”ಯೋನ 4:1, ಯೋನ 4:9
- ಜ್ಞಾನಿಗಳಿಂದ ವಂಚಿತನಾದ ಹೆರೋದನು ಬಹಳ ಕೋಪಗೊಳ್ಳುತ್ತಾನೆಮತ್ತಾ 2:16
ವಚನಗಳು
ಮತ್ತಾ 2:16ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
- ನಜರೇತಿನ ಸಭಾಮಂದಿರದವರು ಯೇಸುವನ್ನು ಬೆಟ್ಟದ ಕಡಿದಾದ ಸ್ಥಳದಿಂದ ಕೆಳಗೆ ತಳ್ಳಲು ಪ್ರಯತ್ನಿಸುತ್ತಾರೆಲೂಕ 4:28–29
ವಚನಗಳು
ಲೂಕ 4:28–29ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
- ಯೇಸು ಅವರ ಹೃದಯದ ಕಾಠಿಣ್ಯಕ್ಕೆ ದುಃಖಪಟ್ಟು ಕೋಪದಿಂದ ಸುತ್ತಲೂ ನೋಡುತ್ತಾನೆಮಾರ್ಕ 3:5
ವಚನಗಳು
ಮಾರ್ಕ 3:5ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
- ಹಿರೀಸಭೆಯವರು ರೋಷಗೊಂಡು ಸ್ತೆಫನನ ಮೇಲೆ ಹಲ್ಲು ಕಡಿಯುತ್ತಾರೆಅ. ಕೃ 7:54–58
ವಚನಗಳು
ಅ. ಕೃ 7:54–58ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು. ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು; “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು. ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು, ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
- ಪೌಲನು ಮಹಾಯಾಜಕನಿಗೆ: “ಸುಣ್ಣ ಬಳಿದ ಗೋಡೆಯೇ”ಅ. ಕೃ 23:3
ವಚನಗಳು
ಅ. ಕೃ 23:3“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು