Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಗುಪ್ತ ಕೊಲೆಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಗುಪ್ತ ಕೊಲೆಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 23 ವಾಕ್ಯಭಾಗಗಳು, ಸಾಲು ಸಾಲಾಗಿ.

  • ‘ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು’ಧರ್ಮೋ 27:24
    ವಚನಗಳು
    ಧರ್ಮೋ 27:24“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
  • ಈಷ್ಬೋಶೆತನನ್ನು ಕೊಂದವರಿಗೆ ದಾವೀದನು ಮರಣದಂಡನೆ ವಿಧಿಸಿದನು2 ಸಮು 4:9–12
    ವಚನಗಳು
    2 ಸಮು 4:9–12ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ, “ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ? ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ, ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.

ಉದಾಹರಣೆಗಳು

  • ಏಹೂದನು ಅಡಗಿಸಿಟ್ಟ ಕತ್ತಿಯಿಂದ ಮೋವಾಬಿನ ಅರಸನಾದ ಎಗ್ಲೋನನನ್ನು ಕೊಂದನುನ್ಯಾಯ 3:15–22
    ವಚನಗಳು
    ನ್ಯಾಯ 3:15–22ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು. ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ. ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು, ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು. ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು. ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು. ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
  • ಅಬೀಮೆಲೆಕನು ತನ್ನ ಸಹೋದರರನ್ನು ಒಂದೇ ಕಲ್ಲಿನ ಮೇಲೆ ಕೊಂದನು; ಯೋತಾಮನು ಅಡಗಿಕೊಂಡನುನ್ಯಾಯ 9:5
    ವಚನಗಳು
    ನ್ಯಾಯ 9:5ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
  • ಯೋವಾಬನು ಹೆಬ್ರೋನಿನ ಬಾಗಿಲಲ್ಲಿ ಅಬ್ನೇರನನ್ನು ತಿವಿದನು2 ಸಮು 3:27
    ವಚನಗಳು
    2 ಸಮು 3:27ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
  • ರೇಕಾಬ್ ಮತ್ತು ಬಾಣ ಮಧ್ಯಾಹ್ನ ಈಷ್ಬೋಶೆತನನ್ನು ಅವನ ಹಾಸಿಗೆಯಲ್ಲೇ ಕೊಂದರು2 ಸಮು 4:5–7
    ವಚನಗಳು
    2 ಸಮು 4:5–7ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು. ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು. ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,
  • ಅಮ್ನೋನನು ದ್ರಾಕ್ಷಾರಸದಿಂದ ಉಲ್ಲಾಸಗೊಂಡಿದ್ದಾಗ ಅಬ್ಷಾಲೋಮನ ಸೇವಕರು ಅವನನ್ನು ಕೊಂದರು2 ಸಮು 13:28–29
    ವಚನಗಳು
    2 ಸಮು 13:28–29ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು. ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
  • ಯೋವಾಬನು ಅಮಾಸನ ಗಡ್ಡವನ್ನು ಹಿಡಿದು ಅವನನ್ನು ತಿವಿದನು2 ಸಮು 20:9–10
    ವಚನಗಳು
    2 ಸಮು 20:9–10ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
  • ಬಾಷನು ಗಿಬ್ಬೆತೋನಿನಲ್ಲಿ ಅರಸನಾದ ನಾದಾಬನನ್ನು ಕೊಂದನು1 ಅರಸು 15:27–28
    ವಚನಗಳು
    1 ಅರಸು 15:27–28ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು. ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
  • ಅರಸನಾದ ಏಲನು ಅಮಲೇರಿದ್ದಾಗ ಜಿಮ್ರಿಯು ಅವನನ್ನು ಕೊಂದನು1 ಅರಸು 16:9–10
    ವಚನಗಳು
    1 ಅರಸು 16:9–10ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು. ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
  • ಯೇಹುವು ಅರಸನಾದ ಯೋರಾಮನ ಹೆಗಲುಗಳ ನಡುವೆ ಬಾಣ ಹೊಡೆದನು2 ಅರಸು 9:24
    ವಚನಗಳು
    2 ಅರಸು 9:24ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
  • ಯೇಹುವಿನ ಜನರು ಯೆಹೂದದ ಅರಸನಾದ ಅಹಜ್ಯನನ್ನು ಅವನ ರಥದಲ್ಲೇ ಹೊಡೆದರು2 ಅರಸು 9:27
    ವಚನಗಳು
    2 ಅರಸು 9:27ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
  • ಯೋವಾಷನನ್ನು ಅವನ ಸೇವಕರು ಮಿಲ್ಲೋ ಗೃಹದಲ್ಲಿ ಕೊಂದರು2 ಅರಸು 12:20–21
    ವಚನಗಳು
    2 ಅರಸು 12:20–21ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು. ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
  • ಒಳಸಂಚುಗಾರರು ಅಮಚ್ಯನನ್ನು ಲಾಕೀಷಿನ ವರೆಗೆ ಹಿಂಬಾಲಿಸಿ ಕೊಂದರು2 ಅರಸು 14:19
    ವಚನಗಳು
    2 ಅರಸು 14:19ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.
  • ಇಸ್ರಾಯೇಲಿನಲ್ಲಿ ಶಲ್ಲೂಮ್, ಮೆನಹೇಮ್, ಪೆಕಹ ಮತ್ತು ಹೋಶೇಯ — ಪ್ರತಿಯೊಬ್ಬನೂ ಒಬ್ಬ ಅರಸನನ್ನು ಕೊಂದನು2 ಅರಸು 15:10, 2 ಅರಸು 15:14, 2 ಅರಸು 15:25, 2 ಅರಸು 15:30
    ವಚನಗಳು
    2 ಅರಸು 15:10ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
    2 ಅರಸು 15:14ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
    2 ಅರಸು 15:25ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
    2 ಅರಸು 15:30ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
  • ಅರಸನಾದ ಆಮೋನನನ್ನು ಅವನ ಸೇವಕರು ಅರಮನೆಯಲ್ಲೇ ಕೊಂದರು2 ಅರಸು 21:23
    ವಚನಗಳು
    2 ಅರಸು 21:23ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.
  • ಸನ್ಹೇರೀಬನು ಆರಾಧಿಸುತ್ತಿದ್ದಾಗ ಅವನ ಮಕ್ಕಳೇ ಅವನನ್ನು ಕೊಂದರು2 ಅರಸು 19:37, ಯೆಶಾ 37:38
    ವಚನಗಳು
    2 ಅರಸು 19:37ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
    ಯೆಶಾ 37:38ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
  • ನೆತನ್ಯನ ಮಗನಾದ ಇಷ್ಮಾಯೇಲನು ಗೆದಲ್ಯನನ್ನು ಕೊಂದನು2 ಅರಸು 25:25
    ವಚನಗಳು
    2 ಅರಸು 25:25ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
  • ಅಹಷ್ವೇರೋಷನನ್ನು ಕೊಲ್ಲಲು ಇಬ್ಬರು ಕಂಚುಕಿಗಳು ಮಾಡಿದ ಒಳಸಂಚನ್ನು ಮೊರ್ದೆಕೈ ಬಯಲುಮಾಡಿದನುಎಸ್ತೇ 2:21–23
    ವಚನಗಳು
    ಎಸ್ತೇ 2:21–23ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು. ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು. ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು