Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕರಡಿಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಕರಡಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 7 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಕುರಿಮರಿಗಳನ್ನು ಹಿಡಿದ ಸಿಂಹವನ್ನೂ ಕರಡಿಯನ್ನೂ ದಾವೀದನು ಕೊಂದನು1 ಸಮು 17:34–37
    ವಚನಗಳು
    1 ಸಮು 17:34–37ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು. ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು. ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,
  • ಎಲೀಷನನ್ನು ಪರಿಹಾಸ್ಯಮಾಡಿದ ನಾಲ್ವತ್ತೆರಡು ಹುಡುಗರನ್ನು ಎರಡು ಹೆಣ್ಣುಕರಡಿಗಳು ಸೀಳಿದವು2 ಅರಸು 2:23–24
    ವಚನಗಳು
    2 ಅರಸು 2:23–24ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು. ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.
  • ದಾವೀದನೂ ಅವನ ಜನರೂ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಉಗ್ರರು2 ಸಮು 17:8
    ವಚನಗಳು
    2 ಸಮು 17:8ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
  • ಮೂರ್ಖತನದಲ್ಲಿರುವ ಮೂಢನನ್ನು ಎದುರುಗೊಳ್ಳುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರುಗೊಳ್ಳುವುದು ಲೇಸುಜ್ಞಾನೋ 17:12
    ವಚನಗಳು
    ಜ್ಞಾನೋ 17:12ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
  • ಕ್ರೂರನಾದ ಅಧಿಪತಿಯು ಮೇಲೆಬೀಳುವ ಕರಡಿಯಂತೆಜ್ಞಾನೋ 28:15
    ವಚನಗಳು
    ಜ್ಞಾನೋ 28:15ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
  • ಸಿಂಹದಿಂದ ಓಡಿಹೋಗಿ ಕರಡಿಯನ್ನು ಎದುರುಗೊಳ್ಳುವುದುಆಮೋ 5:19
    ವಚನಗಳು
    ಆಮೋ 5:19ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
  • ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆಯೆಶಾ 59:11
    ವಚನಗಳು
    ಯೆಶಾ 59:11ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು