Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಪಕ್ಷಿಗಳು

ಪ್ರಕೃತಿ

ಬೈಬಲಿನಲ್ಲಿ ಪಕ್ಷಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 38 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಐದನೆಯ ದಿನದಲ್ಲಿ ಜಲಜಂತುಗಳೊಂದಿಗೆ ಪಕ್ಷಿಗಳನ್ನು ಉಂಟುಮಾಡಲಾಯಿತುಆದಿ 1:20–23
    ವಚನಗಳು
    ಆದಿ 1:20–23ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
  • ಜಲಪ್ರಳಯದ ನಂತರ ಪಕ್ಷಿಗಳನ್ನೂ ಆಹಾರವಾಗಿ ಕೊಡಲಾಯಿತುಆದಿ 9:2–3
    ವಚನಗಳು
    ಆದಿ 9:2–3ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
  • ಇಸ್ರಾಯೇಲರು ಯಾವ ಶುದ್ಧ ಪಕ್ಷಿಯನ್ನಾದರೂ ತಿನ್ನಬಹುದುಧರ್ಮೋ 14:11
    ವಚನಗಳು
    ಧರ್ಮೋ 14:11ಎಲ್ಲಾ ಶುದ್ಧ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಹುದು.
  • ತಿನ್ನಬಾರದವುಗಳು: ಹದ್ದು, ರಣಹದ್ದುಗಳು, ಕಾಗೆ, ಉಷ್ಟ್ರಪಕ್ಷಿ, ಗೂಬೆಗಳು, ಕೊಕ್ಕರೆ, ಬಕ, ಹೂಪೋ ಹಕ್ಕಿ, ಬಾವಲಿಯಾಜ 11:13–19
    ವಚನಗಳು
    ಯಾಜ 11:13–19“‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ, ಹದ್ದು, ಸಕಲವಿಧವಾದ ಗಿಡುಗ, ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ, ಗೂಬೆ, ಹೆಗ್ಗೂಬೆ, ನೀರುಕಾಗೆ, ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
  • ಪಕ್ಷಿಗಳು ಬುಗ್ಗೆಗಳ ಬಳಿ ಗೂಡುಕಟ್ಟಿ ಕೊಂಬೆಗಳ ನಡುವೆ ಹಾಡುತ್ತವೆಕೀರ್ತ 104:12
    ವಚನಗಳು
    ಕೀರ್ತ 104:12ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
  • ಕೊಕ್ಕರೆಯು ತುರಾಯಿ ಮರಗಳಲ್ಲಿ ತನ್ನ ಮನೆಯನ್ನು ಮಾಡಿಕೊಳ್ಳುತ್ತದೆಕೀರ್ತ 104:17
    ವಚನಗಳು
    ಕೀರ್ತ 104:17ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
  • ವಸಂತಕಾಲದಲ್ಲಿ ಬೆಳವಕ್ಕಿಗಳ ಕೂಗು ಕೇಳಿಸುತ್ತದೆಪ.ಗೀ 2:12
    ವಚನಗಳು
    ಪ.ಗೀ 2:12ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
  • ಕೊಕ್ಕರೆ, ಬೆಳವಕ್ಕಿ, ಬಾನಕ್ಕಿ ಮತ್ತು ಕೀಚುಹಕ್ಕಿಗಳು ತಮ್ಮ ವಲಸೆಯ ಕಾಲವನ್ನು ಕಾಪಾಡುತ್ತವೆಯೆರೆ 8:7
    ವಚನಗಳು
    ಯೆರೆ 8:7ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
  • ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ಮರಳಿನಲ್ಲಿ ಕಾವಿಗಾಗಿ ನೆಲದ ಮೇಲೆ ಬಿಡುತ್ತದೆಯೋಬ 39:14–15
    ವಚನಗಳು
    ಯೋಬ 39:14–15ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.
  • ರೆಕ್ಕೆಗಳನ್ನು ಹರಡಿಕೊಂಡು ಉಷ್ಟ್ರಪಕ್ಷಿಯು ಕುದುರೆಯನ್ನೂ ಅದರ ಸವಾರನನ್ನೂ ಹಾಸ್ಯಮಾಡುತ್ತದೆಯೋಬ 39:18
    ವಚನಗಳು
    ಯೋಬ 39:18ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.
  • ಡೇಗೆಯು ದಕ್ಷಿಣದ ಕಡೆಗೆ ತನ್ನ ರೆಕ್ಕೆಗಳನ್ನು ಚಾಚುತ್ತದೆಯೋಬ 39:26
    ವಚನಗಳು
    ಯೋಬ 39:26ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ?
  • ಗುಬ್ಬಿಗಳು ಕಾಸಿಗೆ ಎರಡರಂತೆ, ಅಥವಾ ಎರಡು ಕಾಸಿಗೆ ಐದರಂತೆ ಮಾರಲ್ಪಡುತ್ತವೆಮತ್ತಾ 10:29, ಲೂಕ 12:6
    ವಚನಗಳು
    ಮತ್ತಾ 10:29ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
    ಲೂಕ 12:6ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.
  • ಗುಬ್ಬಿಯೂ ಬಾನಕ್ಕಿಯೂ ದೇವಾಲಯದ ಯಜ್ಞವೇದಿಗಳ ಬಳಿ ಗೂಡುಕಟ್ಟುತ್ತವೆಕೀರ್ತ 84:3
    ವಚನಗಳು
    ಕೀರ್ತ 84:3ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
  • ಪಕ್ಷಿಗಳು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಸಿಡುವುದಿಲ್ಲಮತ್ತಾ 6:26
    ವಚನಗಳು
    ಮತ್ತಾ 6:26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
  • ಬೆಳೆದ ಸಾಸಿವೆ ಗಿಡದ ಕೊಂಬೆಗಳಲ್ಲಿ ಪಕ್ಷಿಗಳು ಗೂಡುಕಟ್ಟುತ್ತವೆಮತ್ತಾ 13:32
    ವಚನಗಳು
    ಮತ್ತಾ 13:32ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
  • “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ”ಮತ್ತಾ 8:20
    ವಚನಗಳು
    ಮತ್ತಾ 8:20ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
  • ಎಲ್ಲಾ ವಿಧವಾದ ಪಕ್ಷಿಗಳನ್ನು ಮನುಷ್ಯನು ಪಳಗಿಸಿದ್ದಾನೆಯಾಕೋ 3:7
    ವಚನಗಳು
    ಯಾಕೋ 3:7ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
  • ಸೊಲೊಮೋನನು ಮೃಗಗಳ, ಪಕ್ಷಿಗಳ, ಕ್ರಿಮಿಕೀಟಗಳ ಮತ್ತು ಮೀನುಗಳ ವಿಷಯವಾಗಿ ಬೋಧಿಸಿದನು1 ಅರಸು 4:33
    ವಚನಗಳು
    1 ಅರಸು 4:33ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.

ಕಥೆಗಳಲ್ಲಿ

  • ನೋಹನ ಪಾರಿವಾಳವು ಆಗ ತಾನೇ ಕಿತ್ತ ಎಣ್ಣೆಮರದ ಎಲೆಯೊಂದಿಗೆ ಹಿಂದಿರುಗಿತುಆದಿ 8:8–12
    ವಚನಗಳು
    ಆದಿ 8:8–12ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು. ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.
  • ಹಿಂಸ್ರಪಕ್ಷಿಗಳು ಅಬ್ರಾಮನ ಕಳೇಬರಗಳ ಮೇಲೆ ಎರಗಿದವು, ಅವನು ಅವುಗಳನ್ನು ಓಡಿಸಿದನುಆದಿ 15:10–11
    ವಚನಗಳು
    ಆದಿ 15:10–11ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ. ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
  • ಸಾಯಂಕಾಲದಲ್ಲಿ ಲಾವಕ್ಕಿಗಳು ಪಾಳೆಯವನ್ನು ಮುಚ್ಚಿದವುವಿಮೋ 16:13
    ವಚನಗಳು
    ವಿಮೋ 16:13ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
  • ಸಮುದ್ರದ ಕಡೆಯಿಂದ ಬಡಿದುಬಂದ ಲಾವಕ್ಕಿಗಳು; ಯಾರೂ ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಲಿಲ್ಲಅರಣ್ಯ 11:31–32
    ವಚನಗಳು
    ಅರಣ್ಯ 11:31–32ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು. ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
  • ಸೊಲೊಮೋನನ ಮೇಜಿಗೆ ಕೊಬ್ಬಿಸಿದ ಕೋಳಿಗಳು; ನೆಹೆಮೀಯನ ಮೇಜಿಗೆ ಪ್ರತಿದಿನ ಪಕ್ಷಿಗಳು1 ಅರಸು 4:23, ನೆಹೆ 5:18
    ವಚನಗಳು
    1 ಅರಸು 4:23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
    ನೆಹೆ 5:18ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
  • ಪೇತ್ರನು ಯೇಸುವನ್ನು ಅಲ್ಲಗಳೆದಾಗ ಕೋಳಿ ಕೂಗಿತುಮತ್ತಾ 26:74–75
    ವಚನಗಳು
    ಮತ್ತಾ 26:74–75ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು. ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಧರ್ಮಶಾಸ್ತ್ರದಲ್ಲಿ

  • ಗೂಡಿನಿಂದ ಮರಿಗಳನ್ನು ತೆಗೆದುಕೊ, ಆದರೆ ತಾಯಿಪಕ್ಷಿಯನ್ನು ಬಿಟ್ಟುಬಿಡುಧರ್ಮೋ 22:6–7
    ವಚನಗಳು
    ಧರ್ಮೋ 22:6–7ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು. ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.
  • ಚರ್ಮರೋಗದಿಂದ ಶುದ್ಧೀಕರಣ: ಎರಡು ಪಕ್ಷಿಗಳು, ಒಂದನ್ನು ಬಯಲಿಗೆ ಬಿಡಲಾಗುತ್ತದೆಯಾಜ 14:4–7
    ವಚನಗಳು
    ಯಾಜ 14:4–7ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು. “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು. ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
  • ಮಗುವಾದ ಯೇಸುವಿಗಾಗಿ: ಒಂದು ಜೋಡಿ ಬೆಳವಕ್ಕಿಗಳು ಅಥವಾ ಎರಡು ಪಾರಿವಾಳದ ಮರಿಗಳುಲೂಕ 2:22–23, ಲೂಕ 2:24
    ವಚನಗಳು
    ಲೂಕ 2:22–23ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
    ಲೂಕ 2:24ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.

ಉರುಲುಗಳ ಕುರಿತು ನುಡಿಗಳು

  • “ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ”ಜ್ಞಾನೋ 1:17
    ವಚನಗಳು
    ಜ್ಞಾನೋ 1:17ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
  • “ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ?”ಆಮೋ 3:5
    ವಚನಗಳು
    ಆಮೋ 3:5ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ? ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ?
  • “ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ”ಕೀರ್ತ 124:7
    ವಚನಗಳು
    ಕೀರ್ತ 124:7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
  • ಉರುಲಿನಲ್ಲಿ ಸಿಕ್ಕಿಬಿದ್ದ ಪಕ್ಷಿಗಳಂತೆಪ್ರಸ 9:12
    ವಚನಗಳು
    ಪ್ರಸ 9:12ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.

ಇತರ ನುಡಿಗಳು

  • “ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ”ಜ್ಞಾನೋ 27:8
    ವಚನಗಳು
    ಜ್ಞಾನೋ 27:8ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.
  • ಮೋಸದಿಂದ ತುಂಬಿದ ಮನೆಗಳು “ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ”ಯೆರೆ 5:27
    ವಚನಗಳು
    ಯೆರೆ 5:27ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
  • “ಮನೆಮಾಳಿಗೆಯ ಮೇಲಿರುವ, ಒಂಟಿಯಾದ ಪಕ್ಷಿಯಂತಿದ್ದೇನೆ”ಕೀರ್ತ 102:7
    ವಚನಗಳು
    ಕೀರ್ತ 102:7ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ, ಒಂಟಿಯಾದ ಪಕ್ಷಿಯಂತಿದ್ದೇನೆ.
  • “ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು”ಯೆಶಾ 38:14
    ವಚನಗಳು
    ಯೆಶಾ 38:14ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು