ಅನ್ವೇಷಿಸಿ › ವಿಷಯಗಳು › ಜನನ ಮತ್ತು ಬಂಜೆತನ
ದೈನಂದಿನ ಜೀವನ
ಬೈಬಲಿನಲ್ಲಿ ಜನನ ಮತ್ತು ಬಂಜೆತನ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 39 ವಾಕ್ಯಭಾಗಗಳು, ಸಾಲು ಸಾಲಾಗಿ.
ಜನನಗಳು
- ಹೆರಿಗೆ ನೋವಿನಲ್ಲಿರುವ ಸ್ತ್ರೀಯು ಮಗು ಹುಟ್ಟಿದ ಸಂತೋಷದಿಂದ ತನ್ನ ವೇದನೆಯನ್ನು ಮರೆಯುತ್ತಾಳೆಯೋಹಾ 16:21
ವಚನಗಳು
ಯೋಹಾ 16:21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
- ಇಬ್ರಿಯ ಸೂಲಗಿತ್ತಿಯರಾದ ಶಿಪ್ರಾ ಮತ್ತು ಪೂವಾ, ಮತ್ತು ಹೆರಿಗೆಯ ಪೀಠವಿಮೋ 1:15–16
ವಚನಗಳು
ವಿಮೋ 1:15–16ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು. ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
- ಇಬ್ರಿಯ ಸ್ತ್ರೀಯರು: “ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು”ವಿಮೋ 1:19
ವಚನಗಳು
ವಿಮೋ 1:19ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.
- ರಾಹೇಲಳಿಗೆ ಕಷ್ಟದ ಹೆರಿಗೆ; ಸೂಲಗಿತ್ತಿಯು ಹೇಳುತ್ತಾಳೆ: “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು”ಆದಿ 35:16–17
ವಚನಗಳು
ಆದಿ 35:16–17ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು. ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
- ಬೇತ್ಲೆಹೇಮಿನ ದಾರಿಯಲ್ಲಿ ರಾಹೇಲಳು ಸಾಯುತ್ತಾಳೆಆದಿ 35:18–19
ವಚನಗಳು
ಆದಿ 35:18–19ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು. ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
- ಸುದ್ದಿಯನ್ನು ಕೇಳಿ ಫೀನೆಹಾಸನ ಹೆಂಡತಿಯು ಹೆತ್ತು ಸಾಯುತ್ತಾಳೆ1 ಸಮು 4:19–20
ವಚನಗಳು
1 ಸಮು 4:19–20ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು. ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
- ಮಗನು ಹುಟ್ಟಿದ ಮೇಲೆ ತಾಯಿ ಏಳು ದಿನ ಅಶುದ್ಧಳು, ಆ ಮೇಲೆ ಶುದ್ಧೀಕರಣಕ್ಕಾಗಿ ಕಾಯುತ್ತಾಳೆಯಾಜ 12:2–4
ವಚನಗಳು
ಯಾಜ 12:2–4“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು. ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
- ಮಗಳು ಹುಟ್ಟಿದ ಮೇಲೆ ಎರಡು ವಾರ ಅಶುದ್ಧಳು, ಆ ಮೇಲೆ ಹೆಚ್ಚು ದಿನಗಳ ಶುದ್ಧೀಕರಣಯಾಜ 12:5
ವಚನಗಳು
ಯಾಜ 12:5ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.
- ಆ ಮೇಲೆ ಕುರಿಮರಿಯನ್ನೂ ಒಂದು ಪಕ್ಷಿಯನ್ನೂ, ಬಡವಳಾದರೆ ಎರಡು ಪಕ್ಷಿಗಳನ್ನು ಅರ್ಪಿಸಲಾಗುತ್ತದೆಯಾಜ 12:6, ಯಾಜ 12:8
ವಚನಗಳು
ಯಾಜ 12:6“‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
ಯಾಜ 12:8ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.
- ಎಲಿಸಬೇತಳ ನೆರೆಹೊರೆಯವರೂ ಬಂಧುಗಳೂ ಆಕೆಯೊಂದಿಗೆ ಸಂತೋಷಪಡುತ್ತಾರೆಲೂಕ 1:57–58
ವಚನಗಳು
ಲೂಕ 1:57–58ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು. ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
ದಾದಿಯರು
- ರೆಬೆಕ್ಕಳ ದಾದಿಯು ಅವಳೊಂದಿಗೆ ಕಾನಾನಿಗೆ ಹೋಗುತ್ತಾಳೆಆದಿ 24:59
ವಚನಗಳು
ಆದಿ 24:59ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.
- ಸಾರಳು: “ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ?”ಆದಿ 21:7
ವಚನಗಳು
ಆದಿ 21:7ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.
- ಮೋಶೆ: “ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು”ಅರಣ್ಯ 11:12
ವಚನಗಳು
ಅರಣ್ಯ 11:12ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
- ಪೌಲನು: ತನ್ನ ಮಕ್ಕಳನ್ನು ಪೋಷಿಸುವ ತಾಯಿಯಂತೆ ಸಾತ್ವಿಕರಾಗಿ1 ಥೆಸ 2:7
ವಚನಗಳು
1 ಥೆಸ 2:7ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
ಬಹುಕಾಲ ಮಕ್ಕಳಿಲ್ಲದೆ
- ಸಾರಯಳು ಬಂಜೆಯಾಗಿದ್ದಳು; ಆಕೆಗೆ ಮಕ್ಕಳಿರಲಿಲ್ಲಆದಿ 11:30
ವಚನಗಳು
ಆದಿ 11:30ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
- ಕುಟುಂಬವನ್ನು ಕಟ್ಟಲು ಸಾರಯಳು ತನ್ನ ದಾಸಿಯಾದ ಹಾಗರಳನ್ನು ಅಬ್ರಾಮನಿಗೆ ಕೊಡುತ್ತಾಳೆಆದಿ 16:1–2
ವಚನಗಳು
ಆದಿ 16:1–2ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು. ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
- ಸಾರಳು ನಗುತ್ತಾಳೆ: ಮಕ್ಕಳನ್ನು ಹೆರುವ ವಯಸ್ಸು ಅವಳಿಗೆ ಮೀರಿಹೋಗಿದೆಆದಿ 18:11–14
ವಚನಗಳು
ಆದಿ 18:11–14ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
- ಸಾರಳು ಇಸಾಕನನ್ನು ಹೆರುತ್ತಾಳೆ; ಅಬ್ರಹಾಮನಿಗೆ ನೂರು ವರ್ಷಆದಿ 17:17, ಆದಿ 21:2, ಆದಿ 21:5
ವಚನಗಳು
ಆದಿ 17:17ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
ಆದಿ 21:2ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
ಆದಿ 21:5ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.
- ಬಂಜೆಯಾದ ರೆಬೆಕ್ಕಳಿಗಾಗಿ ಇಸಾಕನು ಪ್ರಾರ್ಥಿಸುತ್ತಾನೆ, ಆಕೆಯು ಗರ್ಭಿಣಿಯಾಗುತ್ತಾಳೆಆದಿ 25:21
ವಚನಗಳು
ಆದಿ 25:21ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
- ರಾಹೇಲಳು: “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು”ಆದಿ 30:1–2
ವಚನಗಳು
ಆದಿ 30:1–2ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು. ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.
- ರಾಹೇಲಳೂ ಲೇಯಳೂ ಕಾಮಜನಕ ಫಲಗಳಿಗಾಗಿ ಚೌಕಾಸಿಮಾಡುತ್ತಾರೆಆದಿ 30:14–16
ವಚನಗಳು
ಆದಿ 30:14–16ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು. ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.
- ರಾಹೇಲಳು ಯೋಸೇಫನನ್ನು ಹೆರುತ್ತಾಳೆ: “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ”ಆದಿ 30:22–24
ವಚನಗಳು
ಆದಿ 30:22–24ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು. ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು. ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.
- ಬಂಜೆಯಾಗಿದ್ದ ಮಾನೋಹನ ಹೆಂಡತಿಯು ಸಂಸೋನನನ್ನು ಹೆರುತ್ತಾಳೆನ್ಯಾಯ 13:2–3, ನ್ಯಾಯ 13:24
ವಚನಗಳು
ನ್ಯಾಯ 13:2–3ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ. ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.
ನ್ಯಾಯ 13:24ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.
- ಎಲ್ಕಾನನು ಮಕ್ಕಳಿಲ್ಲದ ಹನ್ನಳಿಗೆ ಎರಡು ಪಾಲು ಕೊಡುತ್ತಾನೆ1 ಸಮು 1:2, 1 ಸಮು 1:5
- ಪೆನಿನ್ನಳು ವರ್ಷವರ್ಷವೂ ಹನ್ನಳನ್ನು ಕೆಣಕುತ್ತಾಳೆ1 ಸಮು 1:6–7
ವಚನಗಳು
1 ಸಮು 1:6–7ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.
- ಹನ್ನಳು ಅತ್ತು ಹರಕೆ ಮಾಡುತ್ತಾಳೆ; ಸಮುವೇಲನನ್ನು ಹೆರುತ್ತಾಳೆ1 ಸಮು 1:10–11, 1 ಸಮು 1:19–20
ವಚನಗಳು
1 ಸಮು 1:10–11ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ, “ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
1 ಸಮು 1:19–20ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು. ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
- ಆ ಮೇಲೆ ಹನ್ನಳಿಗೆ ಇನ್ನೂ ಮಕ್ಕಳಾಗುತ್ತಾರೆ1 ಸಮು 2:21
ವಚನಗಳು
1 ಸಮು 2:21ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.
- ಗಂಡನು ಮುದುಕನಾಗಿದ್ದ ಶೂನೇಮ್ಯಳಿಗೆ ಮರುವರ್ಷ ಮಗನಾಗುತ್ತಾನೆ2 ಅರಸು 4:14–17
ವಚನಗಳು
2 ಅರಸು 4:14–17ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು. ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು. ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು. ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.
- ಮೀಕಲಳಿಗೆ ಸಾಯುವ ದಿನದ ವರೆಗೂ ಮಕ್ಕಳಾಗಲಿಲ್ಲ2 ಸಮು 6:23
ವಚನಗಳು
2 ಸಮು 6:23ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.
- ಬಂಜೆಯೂ ಮುದುಕಿಯೂ ಆದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ಮರೆಯಾಗಿರುತ್ತಾಳೆಲೂಕ 1:7, ಲೂಕ 1:24–25, ಲೂಕ 1:36
ವಚನಗಳು
ಲೂಕ 1:7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.
ಲೂಕ 1:24–25ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. “ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.
ಲೂಕ 1:36ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.
- ಬಂಜೆಯಾದವಳನ್ನು ಆತನು ಮನೆಯಲ್ಲಿ ಸಂತೋಷದ ತಾಯಿಯನ್ನಾಗಿ ನೆಲೆಗೊಳಿಸುತ್ತಾನೆಕೀರ್ತ 113:9
ವಚನಗಳು
ಕೀರ್ತ 113:9ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು