ಅನ್ವೇಷಿಸಿ › ವಿಷಯಗಳು › ಜನ್ಮದಿನಗಳು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಜನ್ಮದಿನಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 8 ವಾಕ್ಯಭಾಗಗಳು, ಸಾಲು ಸಾಲಾಗಿ.
- ಫರೋಹನು ತನ್ನ ಜನ್ಮದಿನದಲ್ಲಿ ತನ್ನ ಅಧಿಕಾರಿಗಳಿಗೆ ಔತಣಮಾಡಿದನುಆದಿ 40:20
ವಚನಗಳು
ಆದಿ 40:20ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.
- ಆ ದಿನದಲ್ಲಿ ಅವನು ಪಾನದಾಯಕನನ್ನು ಪುನಃ ನೇಮಿಸಿ ರೊಟ್ಟಿ ಸುಡುವವನನ್ನು ಗಲ್ಲಿಗೇರಿಸಿದನುಆದಿ 40:21–22
ವಚನಗಳು
ಆದಿ 40:21–22ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
- ಹೆರೋದನು ತನ್ನ ಜನ್ಮದಿನದಲ್ಲಿ ಗಲಿಲಾಯದ ಮುಖಂಡರಿಗೆ ಔತಣಮಾಡಿದನುಮಾರ್ಕ 6:21
ವಚನಗಳು
ಮಾರ್ಕ 6:21ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
- ಹೆರೋದ್ಯಳ ಮಗಳು ನಾಟ್ಯವಾಡಿ ಯೋಹಾನನ ತಲೆಯನ್ನು ಕೇಳಿದಳುಮತ್ತಾ 14:6–8
ವಚನಗಳು
ಮತ್ತಾ 14:6–8ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
- ಯೋಬನು ತಾನು ಹುಟ್ಟಿದ ದಿನವನ್ನು ಶಪಿಸಿದನುಯೋಬ 3:1–3
ವಚನಗಳು
ಯೋಬ 3:1–3ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ, ಯೋಬನು ಇಂತೆಂದನು, “ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ
- ಯೆರೆಮೀಯನು: ನಾನು ಹುಟ್ಟಿದ ದಿನವು ಶಾಪಗ್ರಸ್ತವಾಗಲಿಯೆರೆ 20:14, ಯೆರೆ 20:18
ವಚನಗಳು
ಯೆರೆ 20:14ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
ಯೆರೆ 20:18ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?
- ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನ್ಮದಿನಕ್ಕಿಂತ ಮರಣದಿನವು ಲೇಸುಪ್ರಸ 7:1
ವಚನಗಳು
ಪ್ರಸ 7:1ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು