Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಲಂಚಗಳು

ದೈನಂದಿನ ಜೀವನ

ಬೈಬಲಿನಲ್ಲಿ ಲಂಚಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 27 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಲಂಚ ತೆಗೆದುಕೊಳ್ಳಬೇಡ, ಏಕೆಂದರೆ ಲಂಚವು ಕಣ್ಣುಗಳನ್ನು ಕುರುಡುಮಾಡುತ್ತದೆವಿಮೋ 23:8, ಧರ್ಮೋ 16:19
    ವಚನಗಳು
    ವಿಮೋ 23:8ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
    ಧರ್ಮೋ 16:19ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
  • ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಳ್ಳುವವನು ಶಾಪಗ್ರಸ್ತನುಧರ್ಮೋ 27:25
    ವಚನಗಳು
    ಧರ್ಮೋ 27:25“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
  • ಸಮುವೇಲನು: “ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ?”1 ಸಮು 12:3
    ವಚನಗಳು
    1 ಸಮು 12:3ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
  • ಅರಸನಾದ ಯೆಹೋಷಾಫಾಟನು ತನ್ನ ನ್ಯಾಯಾಧಿಪತಿಗಳಿಗೆ: ಪಕ್ಷಪಾತವೂ ಲಂಚವೂ ಬೇಡ2 ಪೂರ್ವ 19:7
    ವಚನಗಳು
    2 ಪೂರ್ವ 19:7ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
  • ದೇವರ ಬಳಿ ಯಾರು ವಾಸಿಸಬಹುದು? ಲಂಚವನ್ನು ನಿರಾಕರಿಸುವವನುಕೀರ್ತ 15:5, ಯೆಶಾ 33:15
    ವಚನಗಳು
    ಕೀರ್ತ 15:5ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
    ಯೆಶಾ 33:15ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
  • ಜ್ಞಾನೋಕ್ತಿಗಳ ನುಡಿಗಳು: ಕಾಣಿಕೆಯು ಬಾಗಿಲುಗಳನ್ನು ತೆರೆಯುತ್ತದೆ; ರಹಸ್ಯವಾದ ಕಾಣಿಕೆಯು ಕೋಪವನ್ನು ತಣಿಸುತ್ತದೆಜ್ಞಾನೋ 17:8, ಜ್ಞಾನೋ 18:16, ಜ್ಞಾನೋ 21:14
    ವಚನಗಳು
    ಜ್ಞಾನೋ 17:8ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
    ಜ್ಞಾನೋ 18:16ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
    ಜ್ಞಾನೋ 21:14ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
  • ಲಂಚವನ್ನು ಹಗೆಮಾಡುವವನು ಬದುಕುವನುಜ್ಞಾನೋ 15:27
    ವಚನಗಳು
    ಜ್ಞಾನೋ 15:27ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
  • ಲಂಚವು ಹೃದಯವನ್ನು ಕೆಡಿಸುತ್ತದೆಪ್ರಸ 7:7
    ವಚನಗಳು
    ಪ್ರಸ 7:7ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
  • ಲಂಚವನ್ನು ಪ್ರೀತಿಸುವ ಅಧಿಕಾರಿಗಳನ್ನೂ ನ್ಯಾಯಾಧಿಪತಿಗಳನ್ನೂ ಪ್ರವಾದಿಗಳು ಖಂಡಿಸುತ್ತಾರೆಯೆಶಾ 1:23, ಯೆಶಾ 5:23, ಮೀಕ 3:11, ಮೀಕ 7:3, ಆಮೋ 5:12
    ವಚನಗಳು
    ಯೆಶಾ 1:23ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
    ಯೆಶಾ 5:23ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
    ಮೀಕ 3:11ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
    ಮೀಕ 7:3ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
    ಆಮೋ 5:12ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.

ಉದಾಹರಣೆಗಳು

  • ಸಮುವೇಲನ ಮಕ್ಕಳು ಲಂಚ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುತ್ತಾರೆ1 ಸಮು 8:3
    ವಚನಗಳು
    1 ಸಮು 8:3ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
  • ಸಂಸೋನನಿಗೆ ದ್ರೋಹಮಾಡಲು ಫಿಲಿಷ್ಟಿಯರ ಅಧಿಪತಿಗಳು ದೆಲೀಲಳಿಗೆ ಬೆಳ್ಳಿಯನ್ನು ಕೊಡುವುದಾಗಿ ಹೇಳುತ್ತಾರೆನ್ಯಾಯ 16:5
    ವಚನಗಳು
    ನ್ಯಾಯ 16:5ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
  • ಆಸನು ದೇವಾಲಯದ ಬೆಳ್ಳಿ ಬಂಗಾರವನ್ನು ಬೆನ್ಹದದನಿಗೆ ಕಳುಹಿಸುತ್ತಾನೆ1 ಅರಸು 15:18–19
    ವಚನಗಳು
    1 ಅರಸು 15:18–19ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು. ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.
  • ಆಹಾಜನು ದೇವಾಲಯದ ಬೆಳ್ಳಿ ಬಂಗಾರವನ್ನು ಅಶ್ಶೂರದ ಅರಸನಿಗೆ ಕಳುಹಿಸುತ್ತಾನೆ2 ಅರಸು 16:8
    ವಚನಗಳು
    2 ಅರಸು 16:8ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
  • ದೇವಾಲಯವನ್ನು ಮತ್ತೆ ಕಟ್ಟುವುದನ್ನು ತಡೆಯಲು ಸಲಹೆಗಾರರನ್ನು ಕೂಲಿಗೆ ಗೊತ್ತುಮಾಡಲಾಗುತ್ತದೆಎಜ್ರ 4:5
    ವಚನಗಳು
    ಎಜ್ರ 4:5ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
  • ನೆಹೆಮೀಯನು ಹೆದರಿ ದೇವಾಲಯದಲ್ಲಿ ಅಡಗಿಕೊಳ್ಳುವಂತೆ ಮಾಡಲು ಶೆಮಾಯನನ್ನು ಕೂಲಿಗೆ ಗೊತ್ತುಮಾಡಲಾಗುತ್ತದೆನೆಹೆ 6:10–13
    ವಚನಗಳು
    ನೆಹೆ 6:10–13ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು. ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು. ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು. ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.
  • ಯೆಹೂದ್ಯರಿಗೆ ವಿರುದ್ಧವಾದ ರಾಜಾಜ್ಞೆಗಾಗಿ ಹಾಮಾನನು ಹತ್ತು ಸಾವಿರ ತಲಾಂತುಗಳನ್ನು ಕೊಡುವುದಾಗಿ ಹೇಳುತ್ತಾನೆಎಸ್ತೇ 3:9
    ವಚನಗಳು
    ಎಸ್ತೇ 3:9ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
  • ಮುಖ್ಯಯಾಜಕರು ಯೂದನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡುತ್ತಾರೆಮತ್ತಾ 26:15
    ವಚನಗಳು
    ಮತ್ತಾ 26:15“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
  • ಶಿಷ್ಯರು ದೇಹವನ್ನು ಕದ್ದುಕೊಂಡು ಹೋದರೆಂದು ಹೇಳಲು ಸೈನಿಕರಿಗೆ ಹಣ ಕೊಡಲಾಗುತ್ತದೆಮತ್ತಾ 28:12–15
    ವಚನಗಳು
    ಮತ್ತಾ 28:12–15ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, “‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ; ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು. ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
  • ಪೌಲನು ತನಗೆ ಲಂಚ ಕೊಡುವನೆಂದು ದೇಶಾಧಿಪತಿಯಾದ ಫೇಲಿಕ್ಸನು ನಿರೀಕ್ಷಿಸುತ್ತಾನೆಅ. ಕೃ 24:26
    ವಚನಗಳು
    ಅ. ಕೃ 24:26ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು