Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಇಟ್ಟಿಗೆಗಳು ಮತ್ತು ಇಟ್ಟಿಗೆ ಮಾಡುವುದು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಇಟ್ಟಿಗೆಗಳು ಮತ್ತು ಇಟ್ಟಿಗೆ ಮಾಡುವುದು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 15 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಬಾಬೆಲಿನಲ್ಲಿ: ‘ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ’ಆದಿ 11:3
    ವಚನಗಳು
    ಆದಿ 11:3“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
  • ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನೂ ಉಪಯೋಗಿಸಿದರುಆದಿ 11:3
    ವಚನಗಳು
    ಆದಿ 11:3“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
  • ಯೆಹೆಜ್ಕೇಲನು ಒಂದು ಇಟ್ಟಿಗೆಯ ಮೇಲೆ ಯೆರೂಸಲೇಮ್ ಪಟ್ಟಣವನ್ನು ಚಿತ್ರಿಸಿದನುಯೆಹೆ 4:1
    ವಚನಗಳು
    ಯೆಹೆ 4:1“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.
  • ದಾವೀದನು ಅಮ್ಮೋನಿಯರನ್ನು ಇಟ್ಟಿಗೆಗೂಡುಗಳಲ್ಲಿ ಕೆಲಸಕ್ಕೆ ಹಚ್ಚಿದನು2 ಸಮು 12:31
    ವಚನಗಳು
    2 ಸಮು 12:31ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
  • ಯೆರೆಮೀಯನು ತಹಪನೇಸಿನಲ್ಲಿ ಫರೋಹನ ಅರಮನೆಯ ಇಟ್ಟಿಗೆ ನೆಲಗಟ್ಟಿನಲ್ಲಿ ಕಲ್ಲುಗಳನ್ನು ಹೂಳಿಟ್ಟನುಯೆರೆ 43:9
    ವಚನಗಳು
    ಯೆರೆ 43:9ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,
  • ಯೆಶಾಯನಲ್ಲಿ ಒಂದು ಜಂಬದ ಮಾತು: ‘ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು’ಯೆಶಾ 9:10
    ವಚನಗಳು
    ಯೆಶಾ 9:10“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
  • ಇಟ್ಟಿಗೆಯ ಯಜ್ಞವೇದಿಗಳ ಮೇಲೆ ಧೂಪ ಸುಡುವುದನ್ನು ಯೆಶಾಯನು ಉಲ್ಲೇಖಿಸುತ್ತಾನೆಯೆಶಾ 65:3
    ವಚನಗಳು
    ಯೆಶಾ 65:3ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
  • ನಹೂಮನು ನಿನೆವೆಗೆ: ‘ಗಾರೆಯನ್ನು ತುಳಿ; ಇಟ್ಟಿಗೆಗೂಡನ್ನು ಸರಿಮಾಡು!’ನಹೂ 3:14
    ವಚನಗಳು
    ನಹೂ 3:14ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.

ಐಗುಪ್ತದಲ್ಲಿ

  • ಇಟ್ಟಿಗೆ ಮತ್ತು ಗಾರೆಯ ಕೆಲಸದಿಂದ ಇಸ್ರಾಯೇಲರ ಜೀವನವು ಕಹಿಯಾಯಿತುವಿಮೋ 1:14
    ವಚನಗಳು
    ವಿಮೋ 1:14ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
  • ಅವರು ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿದರುವಿಮೋ 1:11
    ವಚನಗಳು
    ವಿಮೋ 1:11ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
  • ಫರೋಹನು: ಇನ್ನು ಹುಲ್ಲು ಕೊಡುವುದಿಲ್ಲ, ಆದರೆ ಇಟ್ಟಿಗೆಗಳ ಲೆಕ್ಕ ಅಷ್ಟೇವಿಮೋ 5:7–8
    ವಚನಗಳು
    ವಿಮೋ 5:7–8“ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ, ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.
  • ಹುಲ್ಲಿಗಾಗಿ ಕೂಳೆಯನ್ನು ಕೂಡಿಸಲು ಜನರು ಐಗುಪ್ತದಲ್ಲೆಲ್ಲಾ ಚದರಿಹೋದರುವಿಮೋ 5:12
    ವಚನಗಳು
    ವಿಮೋ 5:12ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
  • ಲೆಕ್ಕ ತಪ್ಪಿದ್ದಕ್ಕಾಗಿ ಇಸ್ರಾಯೇಲರ ಮೇಲ್ವಿಚಾರಕರನ್ನು ಹೊಡೆಯಲಾಯಿತುವಿಮೋ 5:14
    ವಚನಗಳು
    ವಿಮೋ 5:14ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.
  • ‘ಹುಲ್ಲನ್ನು ಕೊಡದೆ ಇಟ್ಟಿಗೆಗಳನ್ನು ಮಾಡಿರಿ! ಎಂದು ಹೇಳುತ್ತಾರೆ’ವಿಮೋ 5:16
    ವಚನಗಳು
    ವಿಮೋ 5:16ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು.
  • ‘ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದು’ವಿಮೋ 5:18–19
    ವಚನಗಳು
    ವಿಮೋ 5:18–19ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು. ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು