Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಶವಸಂಸ್ಕಾರ ಮತ್ತು ಸಮಾಧಿಗಳು

ದೈನಂದಿನ ಜೀವನ

ಬೈಬಲಿನಲ್ಲಿ ಶವಸಂಸ್ಕಾರ ಮತ್ತು ಸಮಾಧಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 42 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಸತ್ತವರನ್ನು ಬೇಗನೆ, ಹೆಚ್ಚಾಗಿ ಅದೇ ದಿನ ಹೂಣಿಡುತ್ತಿದ್ದರುಧರ್ಮೋ 21:23, ಅ. ಕೃ 5:6, ಅ. ಕೃ 5:10
    ವಚನಗಳು
    ಧರ್ಮೋ 21:23ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
    ಅ. ಕೃ 5:6ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
    ಅ. ಕೃ 5:10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.
  • ಸತ್ತ ಅರಸರ ಗೌರವಾರ್ಥವಾಗಿ ಸುಗಂಧದ್ರವ್ಯಗಳನ್ನು ಸುಡುತ್ತಿದ್ದರುಯೆರೆ 34:5
    ವಚನಗಳು
    ಯೆರೆ 34:5ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
  • ಅರಸನಾದ ದಾವೀದನು ಅಬ್ನೇರನ ಚಟ್ಟದ ಹಿಂದೆ ನಡೆದು ಅವನ ಸಮಾಧಿಯ ಬಳಿ ಅಳುತ್ತಾನೆ2 ಸಮು 3:31–32
    ವಚನಗಳು
    2 ಸಮು 3:31–32ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು. ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
  • ನಾಯಿನಿನಲ್ಲಿ ದೊಡ್ಡ ಜನಸಮೂಹವು ವಿಧವೆಯ ಒಬ್ಬನೇ ಮಗನ ಶವಸಂಸ್ಕಾರಕ್ಕೆ ಹಿಂಬಾಲಿಸುತ್ತದೆಲೂಕ 7:12
    ವಚನಗಳು
    ಲೂಕ 7:12ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.

ಶವಯಾತ್ರೆಗಳು

  • ಯಾಕೋಬನನ್ನು ಹೂಣಿಡಲು ಫರೋಹನ ಹಿರಿಯರೂ ರಥಗಳೂ ರಾಹುತರೂ ಹೋಗುತ್ತಾರೆಆದಿ 50:7–9
    ವಚನಗಳು
    ಆದಿ 50:7–9ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು. ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
  • ಇಸಾಕನೂ ಇಷ್ಮಾಯೇಲನೂ ಅಬ್ರಹಾಮನನ್ನು ಹೂಣಿಡುತ್ತಾರೆ; ಏಸಾವನೂ ಯಾಕೋಬನೂ ಇಸಾಕನನ್ನು ಹೂಣಿಡುತ್ತಾರೆಆದಿ 25:9, ಆದಿ 35:29
    ವಚನಗಳು
    ಆದಿ 25:9ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
    ಆದಿ 35:29ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.
  • ಇಸ್ರಾಯೇಲರೆಲ್ಲರೂ ಸಮುವೇಲನಿಗಾಗಿ ಗೋಳಾಡಿ ಅವನನ್ನು ರಾಮದಲ್ಲಿರುವ ಅವನ ಮನೆಯಲ್ಲಿ ಹೂಣಿಡುತ್ತಾರೆ1 ಸಮು 25:1, 1 ಸಮು 28:3
    ವಚನಗಳು
    1 ಸಮು 25:1ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
    1 ಸಮು 28:3ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
  • ಸೌಲನ ಶವವನ್ನು ತರಲು ಯಾಬೇಷಿನವರು ರಾತ್ರಿಯೆಲ್ಲಾ ಪ್ರಯಾಣಮಾಡುತ್ತಾರೆ1 ಸಮು 31:11–13
    ವಚನಗಳು
    1 ಸಮು 31:11–13ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು. ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
  • ದಾವೀದನು ಸೌಲ ಯೋನಾತಾನರ ಎಲುಬುಗಳನ್ನು ಕೀಷನ ಸಮಾಧಿಗೆ ಸ್ಥಳಾಂತರಿಸುತ್ತಾನೆ2 ಸಮು 21:12–14
    ವಚನಗಳು
    2 ಸಮು 21:12–14ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು. ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು. ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
  • ಭಕ್ತರು ಸ್ತೆಫನನನ್ನು ಹೂಣಿಟ್ಟು ಅವನಿಗಾಗಿ ಬಹಳವಾಗಿ ಗೋಳಾಡುತ್ತಾರೆಅ. ಕೃ 8:2
    ವಚನಗಳು
    ಅ. ಕೃ 8:2ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

ಹೂಣಿಡುವುದರ ಬಗ್ಗೆ ಆಸೆಗಳು

  • ಐಗುಪ್ತದಲ್ಲಿ ಅಲ್ಲ, ತನ್ನ ಪಿತೃಗಳ ಬಳಿ ತನ್ನನ್ನು ಹೂಣಿಡಬೇಕೆಂದು ಯಾಕೋಬನು ಕೇಳುತ್ತಾನೆಆದಿ 47:30, ಆದಿ 49:29–32
    ವಚನಗಳು
    ಆದಿ 47:30ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.
    ಆದಿ 49:29–32ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು. ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು. ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ. ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.
  • ತನ್ನ ಎಲುಬುಗಳನ್ನು ಐಗುಪ್ತದಿಂದ ಕೊಂಡೊಯ್ಯಬೇಕೆಂದು ಯೋಸೇಫನು ಇಸ್ರಾಯೇಲರಿಂದ ಪ್ರಮಾಣಮಾಡಿಸಿಕೊಳ್ಳುತ್ತಾನೆಆದಿ 50:25
    ವಚನಗಳು
    ಆದಿ 50:25ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
  • ತನ್ನ ತಂದೆತಾಯಿಗಳ ಸಮಾಧಿಯ ಬಳಿ ಸಾಯಬೇಕೆಂದು ಬರ್ಜಿಲ್ಲೈ ಬಯಸುತ್ತಾನೆ2 ಸಮು 19:37
    ವಚನಗಳು
    2 ಸಮು 19:37ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
  • ದೇವರ ಮನುಷ್ಯನ ಪಕ್ಕದಲ್ಲಿ ತನ್ನನ್ನು ಹೂಣಿಡಬೇಕೆಂದು ಒಬ್ಬ ವೃದ್ಧ ಪ್ರವಾದಿಯು ಕೇಳುತ್ತಾನೆ1 ಅರಸು 13:30–31
    ವಚನಗಳು
    1 ಅರಸು 13:30–31ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು. ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.

ಸಮಾಧಿಗಳು ಮತ್ತು ಹೂಣಿಡುವ ಸ್ಥಳಗಳು

  • ಅಬ್ರಹಾಮನು ನಾನೂರು ಶೆಕೆಲ್ ಬೆಳ್ಳಿಗೆ ಮಕ್ಪೇಲದ ಗವಿಯನ್ನು ಕೊಂಡುಕೊಳ್ಳುತ್ತಾನೆಆದಿ 23:16–20
    ವಚನಗಳು
    ಆದಿ 23:16–20ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ, ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು. ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
  • ಬೇತ್ಲೆಹೇಮಿನ ದಾರಿಯಲ್ಲಿ ರಾಹೇಲಳ ಸಮಾಧಿಯ ಮೇಲೆ ಯಾಕೋಬನು ಸ್ತಂಭವನ್ನು ನಿಲ್ಲಿಸುತ್ತಾನೆಆದಿ 35:19–20
    ವಚನಗಳು
    ಆದಿ 35:19–20ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು. ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.
  • ಮರಗಳ ಕೆಳಗೆ ಹೂಣಿಟ್ಟವರು: ದೆಬೋರಳನ್ನು ಅಲ್ಲೋನ್ ಮರದ ಕೆಳಗೆ, ಸೌಲನನ್ನು ಪಿಚುಲ ಮರದ ಕೆಳಗೆಆದಿ 35:8, 1 ಸಮು 31:13
    ವಚನಗಳು
    ಆದಿ 35:8ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
    1 ಸಮು 31:13ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
  • ಯೆಹೂದದ ಅರಸರನ್ನು ದಾವೀದನ ಪಟ್ಟಣದಲ್ಲಿ ಹೂಣಿಡಲಾಗುತ್ತಿತ್ತು1 ಅರಸು 2:10, 2 ಪೂರ್ವ 32:33
    ವಚನಗಳು
    1 ಅರಸು 2:10ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
    2 ಪೂರ್ವ 32:33ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
  • ಯಾಜಕನಾದ ಯೆಹೋಯಾದನನ್ನು ಅರಸರ ಸಂಗಡ ಹೂಣಿಡಲಾಗುತ್ತದೆ2 ಪೂರ್ವ 24:16
    ವಚನಗಳು
    2 ಪೂರ್ವ 24:16ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
  • ಯೋವಾಷನನ್ನೂ ಯೆಹೋರಾಮನನ್ನೂ ಹೂಣಿಡಲಾಗುತ್ತದೆ, ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ2 ಪೂರ್ವ 24:25, 2 ಪೂರ್ವ 21:20
    ವಚನಗಳು
    2 ಪೂರ್ವ 24:25ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
    2 ಪೂರ್ವ 21:20ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
  • ಕುಷ್ಠರೋಗಿಯಾದ ಉಜ್ಜೀಯನನ್ನು ರಾಜಸಮಾಧಿಗಳ ಬಳಿಯ ಹೊಲದಲ್ಲಿ ಹೂಣಿಡಲಾಗುತ್ತದೆ2 ಪೂರ್ವ 26:23
    ವಚನಗಳು
    2 ಪೂರ್ವ 26:23ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
  • ಮನಸ್ಸೆಯನ್ನೂ ಆಮೋನನನ್ನೂ ಉಜ್ಜನ ತೋಟದಲ್ಲಿ ಹೂಣಿಡಲಾಗುತ್ತದೆ2 ಅರಸು 21:18, 2 ಅರಸು 21:26
    ವಚನಗಳು
    2 ಅರಸು 21:18ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.
    2 ಅರಸು 21:26ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.
  • ಯೋವಾಬನನ್ನು ಅರಣ್ಯದಲ್ಲಿರುವ ಅವನ ಸ್ವಂತ ಮನೆಯಲ್ಲಿ ಹೂಣಿಡಲಾಗುತ್ತದೆ1 ಅರಸು 2:34
    ವಚನಗಳು
    1 ಅರಸು 2:34ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
  • ಯೋಷೀಯನು ಗುಡ್ಡದ ಇಳಿಜಾರಿನಲ್ಲಿ ಸಮಾಧಿಗಳನ್ನೂ ಒಂದರ ಮೇಲೆ ಸ್ಮಾರಕವನ್ನೂ ಕಾಣುತ್ತಾನೆ2 ಅರಸು 23:16–17
    ವಚನಗಳು
    2 ಅರಸು 23:16–17ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು. ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.
  • ಶಿಲುಬೆಯ ಸ್ಥಳದ ಬಳಿಯ ತೋಟದಲ್ಲಿದ್ದ ಹೊಸ ಸಮಾಧಿಯಲ್ಲಿ ಯೇಸುವನ್ನು ಇಡಲಾಗುತ್ತದೆಯೋಹಾ 19:41–42
    ವಚನಗಳು
    ಯೋಹಾ 19:41–42ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
  • ಸಮಾಧಿಯ ದೊಡ್ಡ ಕಲ್ಲನ್ನು ಯಾರು ಉರುಳಿಸುವರೆಂದು ಸ್ತ್ರೀಯರು ಚಿಂತಿಸುತ್ತಾರೆಮಾರ್ಕ 16:3–4
    ವಚನಗಳು
    ಮಾರ್ಕ 16:3–4“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
  • ಪರದೇಶಿಗಳನ್ನು ಹೂಣಿಡುವ ಸ್ಥಳವಾಗಿ ಕುಂಬಾರನ ಹೊಲವನ್ನು ಕೊಂಡುಕೊಳ್ಳಲಾಗುತ್ತದೆಮತ್ತಾ 27:7
    ವಚನಗಳು
    ಮತ್ತಾ 27:7ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
  • ಊರೀಯನ ಶವವನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಎಸೆಯಲಾಗುತ್ತದೆಯೆರೆ 26:23
    ವಚನಗಳು
    ಯೆರೆ 26:23ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
  • ಅಬ್ಷಾಲೋಮನನ್ನು ಗುಂಡಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ರಾಶಿಯನ್ನು ಹಾಕಲಾಗುತ್ತದೆ2 ಸಮು 18:17
    ವಚನಗಳು
    2 ಸಮು 18:17ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
  • ಮೋಶೆಯ ಸಮಾಧಿ ಎಲ್ಲಿದೆಯೆಂದು ಯಾರಿಗೂ ತಿಳಿಯದುಧರ್ಮೋ 34:6
    ವಚನಗಳು
    ಧರ್ಮೋ 34:6ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.
  • ದೆವ್ವಹಿಡಿದ ಒಬ್ಬ ಮನುಷ್ಯನು ಸಮಾಧಿಗಳ ನಡುವೆ ವಾಸಿಸುತ್ತಾನೆಮಾರ್ಕ 5:3–4, ಲೂಕ 8:27, ಮತ್ತಾ 8:28
    ವಚನಗಳು
    ಮಾರ್ಕ 5:3–4ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
    ಲೂಕ 8:27ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
    ಮತ್ತಾ 8:28ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು