Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಒಂಟೆಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಒಂಟೆಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 26 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಒಂಟೆಯನ್ನು ತಿನ್ನಬಾರದಾಗಿತ್ತುಯಾಜ 11:4
    ವಚನಗಳು
    ಯಾಜ 11:4ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
  • ಅಬ್ರಾಮ, ಯಾಕೋಬ ಮತ್ತು ಯೋಬರು ಒಂಟೆಗಳನ್ನು ತಮ್ಮ ಸಂಪತ್ತಿನಲ್ಲಿ ಎಣಿಸುತ್ತಿದ್ದರುಆದಿ 12:16, ಆದಿ 30:43, ಯೋಬ 1:3
    ವಚನಗಳು
    ಆದಿ 12:16ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.
    ಆದಿ 30:43ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.
    ಯೋಬ 1:3ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
  • ಯೋಬನಿಗೆ 3,000 ಒಂಟೆಗಳಿದ್ದವು, ಆ ಮೇಲೆ 6,000ಯೋಬ 1:3, ಯೋಬ 42:12
    ವಚನಗಳು
    ಯೋಬ 1:3ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
    ಯೋಬ 42:12ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.
  • ಇಷ್ಮಾಯೇಲ್ಯನಾದ ಓಬೀಲನು ದಾವೀದನ ಒಂಟೆಗಳ ಮೇಲ್ವಿಚಾರಕನಾಗಿದ್ದನು1 ಪೂರ್ವ 27:30
    ವಚನಗಳು
    1 ಪೂರ್ವ 27:30ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,

ಕಥೆಗಳಲ್ಲಿ

  • ಇಸಾಕನಿಗೆ ಹೆಂಡತಿಯನ್ನು ಹುಡುಕಲು ಅಬ್ರಹಾಮನ ಸೇವಕನು ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನುಆದಿ 24:10
    ವಚನಗಳು
    ಆದಿ 24:10ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
  • ಸಾಯಂಕಾಲ ಅವನು ಬಾವಿಯ ಬಳಿ ಒಂಟೆಗಳನ್ನು ಮಂಡಿಯೂರಿಸಿದನುಆದಿ 24:11
    ವಚನಗಳು
    ಆದಿ 24:11ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
  • ರೆಬೆಕ್ಕಳು ಅವನ ಎಲ್ಲಾ ಒಂಟೆಗಳಿಗೆ ನೀರು ಸೇದಿದಳುಆದಿ 24:14, ಆದಿ 24:19–20
    ವಚನಗಳು
    ಆದಿ 24:14ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.
    ಆದಿ 24:19–20ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ, ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.
  • ರೆಬೆಕ್ಕಳು ಒಂಟೆಯ ಮೇಲೆ ಕುಳಿತು ಇಸಾಕನನ್ನು ಎದುರುಗೊಳ್ಳಲು ಹೋದಳುಆದಿ 24:61, ಆದಿ 24:64
    ವಚನಗಳು
    ಆದಿ 24:61ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.
    ಆದಿ 24:64ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು.
  • ರಾಹೇಲಳು ಲಾಬಾನನ ವಿಗ್ರಹಗಳನ್ನು ತನ್ನ ಒಂಟೆಯ ತಡಿಯಲ್ಲಿ ಅಡಗಿಸಿ ಅವುಗಳ ಮೇಲೆ ಕುಳಿತುಕೊಂಡಳುಆದಿ 31:34
    ವಚನಗಳು
    ಆದಿ 31:34ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.
  • ಏಸಾವನಿಗೆ ಯಾಕೋಬನು ಕೊಟ್ಟ ಉಡುಗೊರೆಯಲ್ಲಿ ಮರಿಗಳೊಂದಿಗೆ 30 ಹಾಲು ಕರೆಯುವ ಒಂಟೆಗಳಿದ್ದವುಆದಿ 32:15
    ವಚನಗಳು
    ಆದಿ 32:15ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
  • ಇಷ್ಮಾಯೇಲ್ಯರ ಒಂಟೆಗಳು ಸುಗಂಧದ್ರವ್ಯಗಳನ್ನು ಐಗುಪ್ತಕ್ಕೆ ಹೊತ್ತುಕೊಂಡು ಹೋದವುಆದಿ 37:25
    ವಚನಗಳು
    ಆದಿ 37:25ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
  • ಮಿದ್ಯಾನ್ಯರ ಒಂಟೆಗಳು ಮರಳಿನಂತೆ ಅಸಂಖ್ಯವಾಗಿದ್ದವುನ್ಯಾಯ 7:12
    ವಚನಗಳು
    ನ್ಯಾಯ 7:12ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
  • ಗಿದ್ಯೋನನು ಅರಸರ ಒಂಟೆಗಳ ಕೊರಳಿನ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನುನ್ಯಾಯ 8:21
    ವಚನಗಳು
    ನ್ಯಾಯ 8:21ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
  • ನಾನೂರು ಮಂದಿ ಅಮಾಲೇಕ್ಯರು ಒಂಟೆಗಳನ್ನು ಹತ್ತಿ ದಾವೀದನಿಂದ ತಪ್ಪಿಸಿಕೊಂಡರು1 ಸಮು 30:17
    ವಚನಗಳು
    1 ಸಮು 30:17ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
  • ಸುಗಂಧದ್ರವ್ಯಗಳನ್ನೂ ಚಿನ್ನವನ್ನೂ ಹೊತ್ತ ಒಂಟೆಗಳೊಂದಿಗೆ ಶೆಬದ ರಾಣಿಯು ಬಂದಳು1 ಅರಸು 10:2
    ವಚನಗಳು
    1 ಅರಸು 10:2ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
  • ಹಜಾಯೇಲನು ನಾಲ್ವತ್ತು ಒಂಟೆಗಳ ಹೊರೆ ಕಾಣಿಕೆಗಳನ್ನು ಎಲೀಷನಿಗೆ ತಂದನು2 ಅರಸು 8:9
    ವಚನಗಳು
    2 ಅರಸು 8:9ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.
  • ಕಸ್ದೀಯ ಸುಲಿಗೆಗಾರರು ಯೋಬನ ಒಂಟೆಗಳನ್ನು ಕೊಂಡೊಯ್ದರುಯೋಬ 1:17
    ವಚನಗಳು
    ಯೋಬ 1:17ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
  • ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿದ್ದನುಮತ್ತಾ 3:4, ಮಾರ್ಕ 1:6
    ವಚನಗಳು
    ಮತ್ತಾ 3:4ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
    ಮಾರ್ಕ 1:6ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.

ಯೇಸುವಿನ ನುಡಿಗಳು

  • ಸೂಜಿಯ ಕಣ್ಣಿನಲ್ಲಿ ಒಂಟೆ ನುಸುಳುವುದು ಸುಲಭಮತ್ತಾ 19:24
    ವಚನಗಳು
    ಮತ್ತಾ 19:24“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.
  • ನೀವು ಸೊಳ್ಳೆಯನ್ನು ಸೋಸಿ ತೆಗೆದು ಒಂಟೆಯನ್ನು ನುಂಗುತ್ತೀರಿಮತ್ತಾ 23:24
    ವಚನಗಳು
    ಮತ್ತಾ 23:24ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು