Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಮುತ್ತಿಗೆಗಳಲ್ಲಿ ಕ್ಷಾಮ

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಮುತ್ತಿಗೆಗಳಲ್ಲಿ ಕ್ಷಾಮ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 7 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಮುತ್ತಿಗೆಯಲ್ಲಿ ತಂದೆತಾಯಿಗಳು ತಮ್ಮ ಮಕ್ಕಳನ್ನು ತಿನ್ನುವುದನ್ನು ಧರ್ಮಶಾಸ್ತ್ರದ ಶಾಪಗಳು ವರ್ಣಿಸುತ್ತವೆಯಾಜ 26:29, ಧರ್ಮೋ 28:53–57
    ವಚನಗಳು
    ಯಾಜ 26:29ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.
    ಧರ್ಮೋ 28:53–57ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ. ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು. ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು. ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.

ಸಮಾರ್ಯ

  • ಸಮಾರ್ಯದ ಮುತ್ತಿಗೆಯಲ್ಲಿ ಕತ್ತೆಯ ತಲೆಯು ಅಪಾರ ಬೆಳ್ಳಿಗೆ ಮಾರಲ್ಪಟ್ಟಿತು2 ಅರಸು 6:24–25
    ವಚನಗಳು
    2 ಅರಸು 6:24–25ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು. ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
  • ಇಬ್ಬರು ತಾಯಂದಿರು ತಮ್ಮ ಮಕ್ಕಳನ್ನು ತಿನ್ನಲು ಒಪ್ಪಿಕೊಂಡರು; ಒಬ್ಬಳು ತನ್ನವನನ್ನು ಅಡಗಿಸಿಟ್ಟಳು2 ಅರಸು 6:28–29
    ವಚನಗಳು
    2 ಅರಸು 6:28–29“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ, ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.
  • ಅದನ್ನು ಕೇಳಿ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನು; ಒಳಗೆ ಅವನು ಗೋಣಿತಟ್ಟನ್ನು ಧರಿಸಿದ್ದನು2 ಅರಸು 6:30
    ವಚನಗಳು
    2 ಅರಸು 6:30ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.

ಯೆರೂಸಲೇಮ್

  • ಪ್ರಲಾಪಗಳು: ಯೆರೂಸಲೇಮಿನ ಪತನದಲ್ಲಿ ಸ್ತ್ರೀಯರು ತಮ್ಮ ಸ್ವಂತ ಕೂಸುಗಳನ್ನು ತಿಂದರುಪ್ರಲಾ 2:20, ಪ್ರಲಾ 4:10
    ವಚನಗಳು
    ಪ್ರಲಾ 2:20ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
    ಪ್ರಲಾ 4:10ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು