ಪ್ರಕೃತಿ
ಬೈಬಲಿನಲ್ಲಿ ಗವಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 30 ವಾಕ್ಯಭಾಗಗಳು, ಸಾಲು ಸಾಲಾಗಿ.
ಆಶ್ರಯ ಮತ್ತು ಅಡಗುವಿಕೆ
- ಲೋಟನೂ ಅವನ ಇಬ್ಬರು ಹೆಣ್ಣುಮಕ್ಕಳೂ ಬೆಟ್ಟಗಳಲ್ಲಿನ ಒಂದು ಗವಿಯಲ್ಲಿ ವಾಸಿಸಿದರುಆದಿ 19:30
ವಚನಗಳು
ಆದಿ 19:30ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
- ಎಲೀಯನು ಹೋರೇಬಿನಲ್ಲಿ ಒಂದು ಗವಿಯಲ್ಲಿ ರಾತ್ರಿ ಕಳೆದನು1 ಅರಸು 19:8–9
ವಚನಗಳು
1 ಅರಸು 19:8–9ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
- ಅವನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಗವಿಯ ಬಾಯಿಯಲ್ಲಿ ನಿಂತನು1 ಅರಸು 19:13
ವಚನಗಳು
1 ಅರಸು 19:13ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
- ಐದು ಮಂದಿ ಅರಸರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡರುಯೆಹೋ 10:16–17
ವಚನಗಳು
ಯೆಹೋ 10:16–17ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು. ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು.
- ಯೆಹೋಶುವನು ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದನುಯೆಹೋ 10:18
ವಚನಗಳು
ಯೆಹೋ 10:18ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.
- ಆ ಮೇಲೆ ಆ ಕಲ್ಲುಗಳು ಗವಿಯ ಬಾಯಿಯಲ್ಲಿ “ಇಂದಿನವರೆಗೂ” ಇದ್ದವುಯೆಹೋ 10:27
ವಚನಗಳು
ಯೆಹೋ 10:27ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.
- ಇಸ್ರಾಯೇಲ್ಯರು ಗವಿಗಳಲ್ಲಿಯೂ ಪೊದೆಗಳಲ್ಲಿಯೂ ಬಂಡೆಗಳಲ್ಲಿಯೂ ನೆಲಮನೆಗಳಲ್ಲಿಯೂ ತೊಟ್ಟಿಗಳಲ್ಲಿಯೂ ಅಡಗಿಕೊಂಡರು1 ಸಮು 13:6
ವಚನಗಳು
1 ಸಮು 13:6ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
- ಫಿಲಿಷ್ಟಿಯರು: “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ”1 ಸಮು 14:11
ವಚನಗಳು
1 ಸಮು 14:11ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
- ಓಬದ್ಯನು ನೂರು ಪ್ರವಾದಿಗಳನ್ನು ಒಂದೊಂದು ಗವಿಯಲ್ಲಿ ಐವತ್ತರಂತೆ ಅಡಗಿಸಿ ಅನ್ನಪಾನ ಕೊಟ್ಟನು1 ಅರಸು 18:4, 1 ಅರಸು 18:13
ವಚನಗಳು
1 ಅರಸು 18:4ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
1 ಅರಸು 18:13ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
- ಸಂಸೋನನು ಏಟಾಮ್ ಬಂಡೆಯ ಗವಿಯಲ್ಲಿ ವಾಸಿಸಿದನುನ್ಯಾಯ 15:8, ನ್ಯಾಯ 15:11
ವಚನಗಳು
ನ್ಯಾಯ 15:8ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.
ನ್ಯಾಯ 15:11ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.
- ದಾವೀದನು ಅದುಲ್ಲಾಮ್ ಗವಿಯಲ್ಲಿ ಆಶ್ರಯ ಪಡೆದನು; ಸುಮಾರು 400 ಜನರು ಅವನನ್ನು ಸೇರಿಕೊಂಡರು1 ಸಮು 22:1–2
ವಚನಗಳು
1 ಸಮು 22:1–2ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು. ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
- ಸುಗ್ಗಿಯ ಕಾಲದಲ್ಲಿ ಮೂವರು ಮುಖ್ಯಸ್ಥರು ಅದುಲ್ಲಾಮ್ ಗವಿಯಲ್ಲಿ ದಾವೀದನ ಬಳಿಗೆ ಬಂದರು2 ಸಮು 23:13, 1 ಪೂರ್ವ 11:15
ವಚನಗಳು
2 ಸಮು 23:13ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
1 ಪೂರ್ವ 11:15ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.
- ದಾವೀದನು ಅಡಗಿಕೊಂಡಿದ್ದ ಗವಿಯೊಳಗೆ ಸೌಲನು ಹೋದನು; ದಾವೀದನು ಅವನ ನಿಲುವಂಗಿಯ ಅಂಚನ್ನು ಕತ್ತರಿಸಿದನು1 ಸಮು 24:3–4
ವಚನಗಳು
1 ಸಮು 24:3–4ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು. ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.
- ದಾವೀದನು ಗವಿಯಿಂದ ಹೊರಗೆ ಬಂದು ಸೌಲನನ್ನು ಕೂಗಿ ಕರೆದನು1 ಸಮು 24:8
ವಚನಗಳು
1 ಸಮು 24:8ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,
- ಎರಡು ಕೀರ್ತನೆಗಳ ಶಿರೋನಾಮೆಗಳು: ದಾವೀದನು “ಗುಹೆಯಲ್ಲಿ”ಕೀರ್ತ 57:1, ಕೀರ್ತ 142:1
ವಚನಗಳು
ಕೀರ್ತ 57:1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
ಕೀರ್ತ 142:1ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.
- ಬಹಿಷ್ಕೃತರು ಬಂಡೆಗಳ ನಡುವೆಯೂ ನೆಲದ ಗುಳಿಗಳಲ್ಲಿಯೂ ವಾಸಿಸುತ್ತಿದ್ದರುಯೋಬ 30:6
ವಚನಗಳು
ಯೋಬ 30:6ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.
- ಕೆಲವರು ಗವಿಗಳಲ್ಲಿಯೂ ನೆಲದ ಗುಳಿಗಳಲ್ಲಿಯೂ ಅಡಗಿಕೊಂಡರುಇಬ್ರಿ 11:38
ವಚನಗಳು
ಇಬ್ರಿ 11:38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
ಸಮಾಧಿ ಗವಿಗಳು
- ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಕ್ಪೇಲದ ಗವಿಯನ್ನು ಕೊಂಡುಕೊಂಡನುಆದಿ 23:9, ಆದಿ 23:17–20
ವಚನಗಳು
ಆದಿ 23:9ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
ಆದಿ 23:17–20ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ, ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು. ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
- ಇಸಾಕನೂ ಇಷ್ಮಾಯೇಲನೂ ಅಬ್ರಹಾಮನನ್ನು ಅಲ್ಲಿ ಹೂಣಿಟ್ಟರುಆದಿ 25:9–10
ವಚನಗಳು
ಆದಿ 25:9–10ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ. ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
- ಯಾಕೋಬನು: ಅಬ್ರಹಾಮ, ಸಾರಾ, ಇಸಾಕ, ರೆಬೆಕ್ಕ ಮತ್ತು ಲೇಯಾ ಆ ಗವಿಯಲ್ಲಿ ಹೂಣಲ್ಪಟ್ಟಿದ್ದಾರೆಆದಿ 49:29–32
ವಚನಗಳು
ಆದಿ 49:29–32ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು. ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು. ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ. ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.
- ಯಾಕೋಬನ ಮಕ್ಕಳು ಅವನನ್ನು ಐಗುಪ್ತದಿಂದ ಮಕ್ಪೇಲಕ್ಕೆ ಹೊತ್ತುಕೊಂಡು ಹೋದರುಆದಿ 50:13
ವಚನಗಳು
ಆದಿ 50:13ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
- ಲಾಜರನ ಸಮಾಧಿಯು ಒಂದು ಗವಿ, ಅದರ ಬಾಯಿಗೆ ಕಲ್ಲನ್ನು ಇಡಲಾಗಿತ್ತುಯೋಹಾ 11:38
ವಚನಗಳು
ಯೋಹಾ 11:38ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
- ಯೇಸುವಿನ ಸಮಾಧಿಯು ಬಂಡೆಯಲ್ಲಿ ಕೊರೆದದ್ದು, ಅದರ ಬಾಯಿಗೆ ಕಲ್ಲನ್ನು ಉರುಳಿಸಲಾಗಿತ್ತುಮತ್ತಾ 27:60, ಮಾರ್ಕ 15:46
ವಚನಗಳು
ಮತ್ತಾ 27:60ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.
ಮಾರ್ಕ 15:46ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.
ನುಡಿಗಳು
- “ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ”ಯೆರೆ 48:28
ವಚನಗಳು
ಯೆರೆ 48:28ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು