Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಲೆಬನೋನಿನ ದೇವದಾರುಗಳು

ಪ್ರಕೃತಿ

ಬೈಬಲಿನಲ್ಲಿ ಲೆಬನೋನಿನ ದೇವದಾರುಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 32 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಸೊಲೊಮೋನನು ಲೆಬನೋನಿನ ದೇವದಾರು ಮೊದಲುಗೊಂಡು ಗೋಡೆಯ ಹಿಸ್ಸೋಪಿನ ವರೆಗೆ ಮರಗಳ ವಿಷಯವಾಗಿ ಮಾತನಾಡಿದನು1 ಅರಸು 4:33
    ವಚನಗಳು
    1 ಅರಸು 4:33ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.
  • ಒಂದು ಕೀರ್ತನೆ: ಲೆಬನೋನಿನ ದೇವದಾರುಗಳು ತೃಪ್ತಿಹೊಂದಿವೆಕೀರ್ತ 104:16
    ವಚನಗಳು
    ಕೀರ್ತ 104:16ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.
  • ಸೊಲೊಮೋನನ ಕಾಲದಲ್ಲಿ ದೇವದಾರು ತಗ್ಗಿನ ಸೀಮೆಯ ಅತ್ತಿಮರದಷ್ಟು ಹೇರಳವಾಗಿತ್ತು1 ಅರಸು 10:27, 2 ಪೂರ್ವ 1:15
    ವಚನಗಳು
    1 ಅರಸು 10:27ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
    2 ಪೂರ್ವ 1:15ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
  • ಕಡಿಯಲ್ಪಟ್ಟ ಅತ್ತಿಮರಗಳ ಸ್ಥಳದಲ್ಲಿ ಜನರು ದೇವದಾರುಗಳನ್ನು ಹಾಕುವರುಯೆಶಾ 9:10
    ವಚನಗಳು
    ಯೆಶಾ 9:10“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
  • ಲೆಬನೋನಿನ ಒಂದು ದೇವದಾರು ತೂರಿಗಾಗಿ ಹಡಗಿನ ಕೂವೆಕಂಬವಾಯಿತುಯೆಹೆ 27:5
    ವಚನಗಳು
    ಯೆಹೆ 27:5ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
  • ಶುದ್ಧೀಕರಣದ ವಿಧಿಗಳಲ್ಲಿ ದೇವದಾರು ಮರ, ಹಿಸ್ಸೋಪ್ ಮತ್ತು ರಕ್ತವರ್ಣದ ನೂಲನ್ನು ಉಪಯೋಗಿಸಲಾಗುತ್ತಿತ್ತುಯಾಜ 14:4, ಅರಣ್ಯ 19:6
    ವಚನಗಳು
    ಯಾಜ 14:4ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
    ಅರಣ್ಯ 19:6ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.

ದೇವದಾರಿನಿಂದ ಕಟ್ಟುವುದು

  • ತೂರಿನ ಹೀರಾಮನು ದಾವೀದನ ಅರಮನೆಗಾಗಿ ದೇವದಾರು ಮರಗಳನ್ನೂ ಬಡಗಿಗಳನ್ನೂ ಕಲ್ಲುಕುಟಿಗರನ್ನೂ ಕಳುಹಿಸಿದನು2 ಸಮು 5:11
    ವಚನಗಳು
    2 ಸಮು 5:11ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
  • ದಾವೀದನು: “ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ”, ಆದರೆ ಮಂಜೂಷವು ಗುಡಾರದಲ್ಲಿದೆ1 ಪೂರ್ವ 17:1
    ವಚನಗಳು
    1 ಪೂರ್ವ 17:1ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.
  • ಸೊಲೊಮೋನನು ಹೀರಾಮನಿಂದ ದೇವದಾರುಗಳನ್ನು ಕೇಳಿದನು; ಚೀದೋನ್ಯರಂತೆ ಮರ ಕಡಿಯುವವರು ಯಾರೂ ಇರಲಿಲ್ಲ1 ಅರಸು 5:6
    ವಚನಗಳು
    1 ಅರಸು 5:6ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.
  • ಮರಗಳನ್ನು ಸಮುದ್ರಕ್ಕೆ ಸಾಗಿಸಿ ತೆಪ್ಪಗಳಾಗಿ ತೇಲಿಸಲಾಯಿತು1 ಅರಸು 5:8–9, 2 ಪೂರ್ವ 2:16
    ವಚನಗಳು
    1 ಅರಸು 5:8–9ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
    2 ಪೂರ್ವ 2:16ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.
  • ಹೀರಾಮನ ಮರ ಕಡಿಯುವವರಿಗೆ ಗೋದಿ, ಜವೆಗೋದಿ, ದ್ರಾಕ್ಷಾರಸ ಮತ್ತು ಎಣ್ಣೆಯಿಂದ ಸಂಬಳ ಕೊಡಲಾಯಿತು2 ಪೂರ್ವ 2:10
    ವಚನಗಳು
    2 ಪೂರ್ವ 2:10ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.
  • 30,000 ಇಸ್ರಾಯೇಲ್ಯರು 10,000 ಮಂದಿಯಂತೆ ತಿಂಗಳ ಸರದಿಗಳಲ್ಲಿ ಲೆಬನೋನಿನಲ್ಲಿ ಕೆಲಸಮಾಡಿದರು1 ಅರಸು 5:13–14
    ವಚನಗಳು
    1 ಅರಸು 5:13–14ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು. ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
  • ದೇವದಾರು ಮತ್ತು ತುರಾಯಿ ಮರಗಳಿಗಾಗಿ ಸೊಲೊಮೋನನು ಹೀರಾಮನಿಗೆ ಗಲಿಲಾಯದಲ್ಲಿ ಇಪ್ಪತ್ತು ಊರುಗಳನ್ನು ಕೊಟ್ಟನು1 ಅರಸು 9:11
    ವಚನಗಳು
    1 ಅರಸು 9:11ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
  • ದೇವಾಲಯದ ಮಾಳಿಗೆಯನ್ನು ದೇವದಾರು ತೊಲೆಗಳಿಂದಲೂ ಹಲಗೆಗಳಿಂದಲೂ ಮುಚ್ಚಲಾಯಿತು1 ಅರಸು 6:9–10
    ವಚನಗಳು
    1 ಅರಸು 6:9–10ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು. ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.
  • ಒಳಗೆ ಸೋರೆಕಾಯಿಗಳೂ ಹೂವುಗಳೂ ಕೆತ್ತಿದ ದೇವದಾರು; ಒಂದು ಕಲ್ಲೂ ಕಾಣಿಸುತ್ತಿರಲಿಲ್ಲ1 ಅರಸು 6:15, 1 ಅರಸು 6:18
    ವಚನಗಳು
    1 ಅರಸು 6:15ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
    1 ಅರಸು 6:18ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
  • ಒಳಗಿನ ಅಂಗಳ: ಕೆತ್ತಿದ ಕಲ್ಲಿನ ಮೂರು ಸಾಲುಗಳು ಮತ್ತು ದೇವದಾರು ತೊಲೆಗಳ ಒಂದು ಸಾಲು1 ಅರಸು 6:36
    ವಚನಗಳು
    1 ಅರಸು 6:36ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.
  • ಲೆಬನೋನಿನ ಅರಣ್ಯದ ಮನೆಯು ದೇವದಾರು ಕಂಬಗಳ ನಾಲ್ಕು ಸಾಲುಗಳ ಮೇಲೆ ನಿಂತಿತ್ತು1 ಅರಸು 7:2–3
    ವಚನಗಳು
    1 ಅರಸು 7:2–3ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು. ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.
  • ಸೆರೆಯಿಂದ ಹಿಂದಿರುಗಿದವರು ಲೆಬನೋನಿನಿಂದ ಯೊಪ್ಪಕ್ಕೆ ದೇವದಾರು ಮರಗಳನ್ನು ಸಮುದ್ರಮಾರ್ಗವಾಗಿ ತರಿಸಿದರುಎಜ್ರ 3:7
    ವಚನಗಳು
    ಎಜ್ರ 3:7ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
  • ಒಬ್ಬ ಅರಸನು ತನ್ನ ಅರಮನೆಗೆ ದೇವದಾರಿನ ಹಲಗೆ ಹೊದಿಸಿ ಇಂಗಲೀಕದಿಂದ ಬಣ್ಣ ಹಚ್ಚುತ್ತಾನೆಯೆರೆ 22:14
    ವಚನಗಳು
    ಯೆರೆ 22:14ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
  • “ತೊಲೆಗಳು ದೇವದಾರು ವೃಕ್ಷಗಳೇ”ಪ.ಗೀ 1:17
    ವಚನಗಳು
    ಪ.ಗೀ 1:17ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.

ನುಡಿಗಳು ಮತ್ತು ನೀತಿಕಥೆಗಳು

  • ಯೆಹೋವಾಷನ ನೀತಿಕಥೆ: ಮುಳ್ಳುಗಿಡವು ದೇವದಾರಿನಿಂದ ಅದರ ಮಗಳನ್ನು ಕೇಳುತ್ತದೆ2 ಅರಸು 14:9
    ವಚನಗಳು
    2 ಅರಸು 14:9ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.
  • ಯೋತಾಮನ ನೀತಿಕಥೆ: ಮುಳ್ಳುಪೊದೆಯಿಂದ ಹೊರಡುವ ಬೆಂಕಿಯು ದೇವದಾರುಗಳನ್ನು ದಹಿಸುತ್ತದೆನ್ಯಾಯ 9:15
    ವಚನಗಳು
    ನ್ಯಾಯ 9:15ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
  • ದೇವದಾರುಗಳಷ್ಟು ಎತ್ತರವೂ ಅಲ್ಲೋನ್ ಮರಗಳಷ್ಟು ಬಲವೂ ಉಳ್ಳ ಅಮೋರಿಯರುಆಮೋ 2:9
    ವಚನಗಳು
    ಆಮೋ 2:9ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
  • ಒಂದು ಕೀರ್ತನೆ: “ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು”ಕೀರ್ತ 92:12
    ವಚನಗಳು
    ಕೀರ್ತ 92:12ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
  • “ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ”ಕೀರ್ತ 29:5
    ವಚನಗಳು
    ಕೀರ್ತ 29:5ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
  • “ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು”ಪ.ಗೀ 5:15
    ವಚನಗಳು
    ಪ.ಗೀ 5:15ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.
  • ದೇವದಾರುಗಳು ಉಲ್ಲಾಸಗೊಳ್ಳುತ್ತವೆ: “ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ”ಯೆಶಾ 14:8
    ವಚನಗಳು
    ಯೆಶಾ 14:8ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
  • “ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ”ಜೆಕ 11:2
    ವಚನಗಳು
    ಜೆಕ 11:2ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು