ಅನ್ವೇಷಿಸಿ › ವಿಷಯಗಳು › ಜನಗಣತಿಗಳು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಜನಗಣತಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 21 ವಾಕ್ಯಭಾಗಗಳು, ಸಾಲು ಸಾಲಾಗಿ.
ಅರಣ್ಯದಲ್ಲಿ
- ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ, ಯುದ್ಧಕ್ಕೆ ಹೋಗಬಲ್ಲ ಪ್ರತಿಯೊಬ್ಬ ಪುರುಷನನ್ನು ಎಣಿಸಲಾಯಿತುಅರಣ್ಯ 1:2–3
ವಚನಗಳು
ಅರಣ್ಯ 1:2–3“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು. ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.
- ಎಣಿಸಲ್ಪಟ್ಟ ಪ್ರತಿಯೊಬ್ಬನೂ, ಐಶ್ವರ್ಯವಂತನಾಗಲಿ ಬಡವನಾಗಲಿ, ಅರ್ಧ ಶೆಕೆಲನ್ನು ಕೊಟ್ಟನುವಿಮೋ 30:13–15, ವಿಮೋ 38:26
ವಚನಗಳು
ವಿಮೋ 30:13–15ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
ವಿಮೋ 38:26ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
- ಮೊದಲನೆಯ ಎಣಿಕೆ: 603,550ಅರಣ್ಯ 1:46
ವಚನಗಳು
ಅರಣ್ಯ 1:46ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
- ಲೇವಿಯರನ್ನು ಇತರ ಕುಲಗಳೊಂದಿಗೆ ಎಣಿಸಲಿಲ್ಲಅರಣ್ಯ 1:47–49
ವಚನಗಳು
ಅರಣ್ಯ 1:47–49ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ. ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.
- ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಲೇವಿ ಗಂಡಸರು: 22,000ಅರಣ್ಯ 3:39
ವಚನಗಳು
ಅರಣ್ಯ 3:39ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.
- ಎರಡನೆಯ ಎಣಿಕೆ, ಯೊರ್ದನಿನ ಬಳಿ: 601,730ಅರಣ್ಯ 26:2, ಅರಣ್ಯ 26:51
ವಚನಗಳು
ಅರಣ್ಯ 26:2“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
ಅರಣ್ಯ 26:51ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
- ಮೊದಲು ಎಣಿಸಲ್ಪಟ್ಟವರಲ್ಲಿ ಕಾಲೇಬ ಮತ್ತು ಯೆಹೋಶುವರ ಹೊರತು ಯಾರೂ ಉಳಿಯಲಿಲ್ಲಅರಣ್ಯ 26:64–65
ವಚನಗಳು
ಅರಣ್ಯ 26:64–65ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ. ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
ದಾವೀದನ ಜನಗಣತಿ
- ಎಣಿಕೆಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳು ಬೇಕಾದವು2 ಸಮು 24:8
ವಚನಗಳು
2 ಸಮು 24:8ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
- ಸಮುವೇಲನು: ಇಸ್ರಾಯೇಲಿನಲ್ಲಿ 800,000, ಯೆಹೂದದಲ್ಲಿ 500,0002 ಸಮು 24:9
ವಚನಗಳು
2 ಸಮು 24:9ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
- ಪೂರ್ವಕಾಲವೃತ್ತಾಂತ: ಇಸ್ರಾಯೇಲಿನಲ್ಲಿ 1,100,000, ಯೆಹೂದದಲ್ಲಿ 470,0001 ಪೂರ್ವ 21:5
ವಚನಗಳು
1 ಪೂರ್ವ 21:5ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
- ಯೋವಾಬನು ಲೇವಿ ಮತ್ತು ಬೆನ್ಯಾಮೀನ್ ಕುಲಗಳನ್ನು ಎಣಿಸಲಿಲ್ಲ1 ಪೂರ್ವ 21:6
ವಚನಗಳು
1 ಪೂರ್ವ 21:6ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
- ಎಣಿಕೆಯ ನಂತರ ದಾವೀದನ ಮನಸ್ಸಾಕ್ಷಿಯು ಅವನನ್ನು ಚುಚ್ಚಿತು2 ಸಮು 24:10
ವಚನಗಳು
2 ಸಮು 24:10ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
- ಆ ಸಂಖ್ಯೆಯನ್ನು ಅರಸನಾದ ದಾವೀದನ ವೃತ್ತಾಂತಗಳಲ್ಲಿ ಬರೆಯಲಿಲ್ಲ1 ಪೂರ್ವ 27:24
ವಚನಗಳು
1 ಪೂರ್ವ 27:24ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.
ಇತರ ಎಣಿಕೆಗಳು
- ಮೂವತ್ತು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಲೇವಿಯರು: 38,0001 ಪೂರ್ವ 23:3
ವಚನಗಳು
1 ಪೂರ್ವ 23:3ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.
- ಸೊಲೊಮೋನನು ದೇಶದಲ್ಲಿದ್ದ 153,600 ಪರದೇಶಿಗಳನ್ನು ಎಣಿಸಿದನು2 ಪೂರ್ವ 2:17
ವಚನಗಳು
2 ಪೂರ್ವ 2:17ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
- ಸೆರೆಯಿಂದ ಹಿಂದಿರುಗಿದವರು 42,360 ಮಂದಿಎಜ್ರ 2:64
ವಚನಗಳು
ಎಜ್ರ 2:64ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಆರವತ್ತು.
- ಔಗುಸ್ತನು ಜನಗಣತಿಗೆ ಆಜ್ಞಾಪಿಸಿದನು; ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದನುಲೂಕ 2:1–2
ವಚನಗಳು
ಲೂಕ 2:1–2ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.
- ಹೆಸರು ಬರೆಯಿಸಿಕೊಳ್ಳಲು ಯೋಸೇಫನೂ ಮರಿಯಳೂ ಬೇತ್ಲೆಹೇಮಿಗೆ ಹೋದರುಲೂಕ 2:3–5
ವಚನಗಳು
ಲೂಕ 2:3–5ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
- ಜನಗಣತಿಯ ದಿನಗಳಲ್ಲಿ ಗಲಿಲಾಯದ ಯೂದನು ಎದ್ದನುಅ. ಕೃ 5:37
ವಚನಗಳು
ಅ. ಕೃ 5:37ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು