ದೈನಂದಿನ ಜೀವನ
ಬೈಬಲಿನಲ್ಲಿ ನೃತ್ಯ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 21 ವಾಕ್ಯಭಾಗಗಳು, ಸಾಲು ಸಾಲಾಗಿ.
- ಸಮುದ್ರವನ್ನು ದಾಟಿದ ನಂತರ ಮಿರ್ಯಾಮಳೂ ಸ್ತ್ರೀಯರೂ ದಮ್ಮಡಿಗಳೊಂದಿಗೆ ನರ್ತಿಸುತ್ತಾರೆವಿಮೋ 15:20
ವಚನಗಳು
ವಿಮೋ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.
- ಮೋಶೆಯು ಬಸವನನ್ನೂ ನೃತ್ಯವನ್ನೂ ಕಾಣುತ್ತಾನೆವಿಮೋ 32:19
ವಚನಗಳು
ವಿಮೋ 32:19ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
- ಯೆಪ್ತಾಹನ ಮಗಳು ನರ್ತಿಸುತ್ತಾ ಅವನನ್ನು ಎದುರುಗೊಳ್ಳಲು ಹೊರಗೆ ಬರುತ್ತಾಳೆನ್ಯಾಯ 11:34
ವಚನಗಳು
ನ್ಯಾಯ 11:34ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
- ಶೀಲೋವಿನ ಹೆಣ್ಣುಮಕ್ಕಳು ವಾರ್ಷಿಕ ಹಬ್ಬದಲ್ಲಿ ನರ್ತಿಸುತ್ತಾರೆನ್ಯಾಯ 21:19–21
ವಚನಗಳು
ನ್ಯಾಯ 21:19–21ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.) ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ; ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.
- ಸ್ತ್ರೀಯರು ನರ್ತಿಸುತ್ತಾ ಹಾಡುತ್ತಾರೆ: “ಸೌಲನು ಸಾವಿರ ಶತ್ರುಗಳನ್ನು ಕೊಂದನು”1 ಸಮು 18:6–7, 1 ಸಮು 21:11
ವಚನಗಳು
1 ಸಮು 18:6–7ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು. ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು.
1 ಸಮು 21:11ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.
- ದಾವೀದನು ಮಂಜೂಷದ ಮುಂದೆ ತನ್ನ ಪೂರ್ಣ ಶಕ್ತಿಯಿಂದ ನರ್ತಿಸುತ್ತಾನೆ2 ಸಮು 6:14–16
ವಚನಗಳು
2 ಸಮು 6:14–16ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು. ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು. ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು
- ಅರಸನಾದ ದಾವೀದನು ನರ್ತಿಸುವುದನ್ನು ಮೀಕಲಳು ಕಂಡು ಅವನನ್ನು ತಿರಸ್ಕರಿಸುತ್ತಾಳೆ1 ಪೂರ್ವ 15:29
ವಚನಗಳು
1 ಪೂರ್ವ 15:29ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.
- ಮಕ್ಕಳು ದಮ್ಮಡಿ ಮತ್ತು ಕಿನ್ನರಿಯ ನಾದಕ್ಕೆ ಕುಣಿದಾಡುತ್ತಾರೆಯೋಬ 21:11–12
ವಚನಗಳು
ಯೋಬ 21:11–12ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು. ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.
- “ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ”ಕೀರ್ತ 30:11
ವಚನಗಳು
ಕೀರ್ತ 30:11ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
- ದಮ್ಮಡಿಯಿಂದಲೂ ನೃತ್ಯದಿಂದಲೂ ಆತನನ್ನು ಸ್ತುತಿಸಿರಿಕೀರ್ತ 149:3, ಕೀರ್ತ 150:4
ವಚನಗಳು
ಕೀರ್ತ 149:3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
ಕೀರ್ತ 150:4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
- ಗೋಳಾಡುವ ಕಾಲ, ಕುಣಿದಾಡುವ ಕಾಲಪ್ರಸ 3:4
ವಚನಗಳು
ಪ್ರಸ 3:4ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
- “ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ” ನೃತ್ಯಪ.ಗೀ 6:13
ವಚನಗಳು
ಪ.ಗೀ 6:13ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?
- ಕನ್ಯೆಯರು ನೃತ್ಯದಿಂದ ಸಂತೋಷಿಸುತ್ತಾರೆ, ಯುವಕರೂ ಮುದುಕರೂ ಸಹಯೆರೆ 31:4, ಯೆರೆ 31:13
ವಚನಗಳು
ಯೆರೆ 31:4ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
ಯೆರೆ 31:13ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
- “ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ”ಪ್ರಲಾ 5:15
ವಚನಗಳು
ಪ್ರಲಾ 5:15ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.
- ಸಂತೆಯಲ್ಲಿ ಮಕ್ಕಳು: “ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ”ಮತ್ತಾ 11:17
ವಚನಗಳು
ಮತ್ತಾ 11:17‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
- ಹಿಂದಿರುಗಿದ ಮಗನಿಗಾಗಿ ವಾದ್ಯವೂ ನೃತ್ಯವೂಲೂಕ 15:25
ವಚನಗಳು
ಲೂಕ 15:25ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
- ಹೆರೋದನ ಜನ್ಮದಿನದ ಔತಣದಲ್ಲಿ ಹೆರೋದ್ಯಳ ಮಗಳು ನಾಟ್ಯವಾಡುತ್ತಾಳೆಮತ್ತಾ 14:6–7, ಮಾರ್ಕ 6:22
ವಚನಗಳು
ಮತ್ತಾ 14:6–7ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
ಮಾರ್ಕ 6:22ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು