ಅನ್ವೇಷಿಸಿ › ವಿಷಯಗಳು › ಸಾಲ ಮತ್ತು ಕಡ
ದೈನಂದಿನ ಜೀವನ
ಬೈಬಲಿನಲ್ಲಿ ಸಾಲ ಮತ್ತು ಕಡ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 28 ವಾಕ್ಯಭಾಗಗಳು, ಸಾಲು ಸಾಲಾಗಿ.
- ಒಬ್ಬರನ್ನೊಬ್ಬರು ಪ್ರೀತಿಸುವುದರ ಹೊರತು ಯಾರಿಗೂ ಸಾಲಗಾರರಾಗಿರಬೇಡಿರಿರೋಮಾ 13:8
ವಚನಗಳು
ರೋಮಾ 13:8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
- ಸಾಲತೆಗೆದುಕೊಳ್ಳುವವನು ಸಾಲಕೊಡುವವನಿಗೆ ದಾಸಜ್ಞಾನೋ 22:7
ವಚನಗಳು
ಜ್ಞಾನೋ 22:7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
- ಸಾಲಗಳಿಗೆ ಹೊಣೆಯಾಗಬೇಡ, ಇಲ್ಲದಿದ್ದರೆ ನಿನ್ನ ಹಾಸಿಗೆಯನ್ನೂ ತೆಗೆದುಕೊಂಡಾರುಜ್ಞಾನೋ 22:26–27, ಜ್ಞಾನೋ 11:15
ವಚನಗಳು
ಜ್ಞಾನೋ 22:26–27ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ, ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
ಜ್ಞಾನೋ 11:15ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
- ನೆರೆಯವನಿಗಾಗಿ ಹೊಣೆಯಾದೆಯಾ? ಕೂಡಲೆ ಹೋಗಿ ನಿನ್ನನ್ನು ಬಿಡಿಸಿಕೋಜ್ಞಾನೋ 6:1–5
ವಚನಗಳು
ಜ್ಞಾನೋ 6:1–5ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ, ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ. ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
ಧರ್ಮಶಾಸ್ತ್ರದಲ್ಲಿ
- ಬಡವನಾದ ಸ್ವದೇಶದವನಿಂದ ಬಡ್ಡಿ ತೆಗೆದುಕೊಳ್ಳಬಾರದು; ಪರದೇಶಿಯಿಂದ ತೆಗೆದುಕೊಳ್ಳಲು ಅನುಮತಿ ಇತ್ತುವಿಮೋ 22:25, ಧರ್ಮೋ 23:19–20
ವಚನಗಳು
ವಿಮೋ 22:25ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
ಧರ್ಮೋ 23:19–20ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
- ಒತ್ತೆಯಾಗಿ ತೆಗೆದುಕೊಂಡ ಮೇಲಂಗಿಯನ್ನು ಸೂರ್ಯಾಸ್ತದೊಳಗೆ ಹಿಂದಿರುಗಿಸಬೇಕುವಿಮೋ 22:26–27, ಧರ್ಮೋ 24:12–13
ವಚನಗಳು
ವಿಮೋ 22:26–27ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು. ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
ಧರ್ಮೋ 24:12–13ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು. ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.
- ಸಾಲಕೊಟ್ಟವನು ಒತ್ತೆಯನ್ನು ಹೊರಗೆ ತರುವ ತನಕ ಹೊರಗೆ ಕಾದಿರಬೇಕುಧರ್ಮೋ 24:10–11
ವಚನಗಳು
ಧರ್ಮೋ 24:10–11ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು. ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.
- ಬೀಸುವ ಕಲ್ಲುಗಳನ್ನು ಒತ್ತೆಯಾಗಿ ತೆಗೆದುಕೊಳ್ಳಬಾರದುಧರ್ಮೋ 24:6
ವಚನಗಳು
ಧರ್ಮೋ 24:6ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.
- ಪ್ರತಿ ಏಳನೆಯ ವರ್ಷದಲ್ಲಿ ಸಾಲಗಳನ್ನು ಮನ್ನಿಸಲಾಗುತ್ತದೆಧರ್ಮೋ 15:1–3
ವಚನಗಳು
ಧರ್ಮೋ 15:1–3ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು. ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು. ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
- ತನ್ನನ್ನು ಮಾರಿಕೊಂಡ ಸ್ವದೇಶದವನು ಕೂಲಿಯಾಳಿನಂತೆ ಕೆಲಸಮಾಡುತ್ತಾನೆಯಾಜ 25:39–41
ವಚನಗಳು
ಯಾಜ 25:39–41“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು. ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ. ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
- ಎರವಲು ತಂದ ಪಶು ಸತ್ತರೆ ಪೂರ್ತಿಯಾಗಿ ಈಡು ಕೊಡಬೇಕುವಿಮೋ 22:14
ವಚನಗಳು
ವಿಮೋ 22:14ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.
ಉದಾಹರಣೆಗಳು
- ಯೆಹೂದನು ತನ್ನ ಮುದ್ರೆಯನ್ನೂ ದಾರವನ್ನೂ ಕೋಲನ್ನೂ ಒತ್ತೆಯಾಗಿ ಬಿಡುತ್ತಾನೆಆದಿ 38:17–18
ವಚನಗಳು
ಆದಿ 38:17–18ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ, ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
- ಸಾಲದಲ್ಲಿದ್ದವರೆಲ್ಲರೂ ದಾವೀದನ ಬಳಿಗೆ ಕೂಡಿಬರುತ್ತಾರೆ1 ಸಮು 22:2
ವಚನಗಳು
1 ಸಮು 22:2ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
- ವಿಧವೆಯ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಳ್ಳಲು ಸಾಲಗಾರನು ಬರುತ್ತಾನೆ2 ಅರಸು 4:1–7
ವಚನಗಳು
2 ಅರಸು 4:1–7ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು. ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
- “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” — ಕೊಡಲಿಯ ಕಬ್ಬಿಣವು ಯೊರ್ದನಿನಲ್ಲಿ ಬೀಳುತ್ತದೆ2 ಅರಸು 6:4–6
ವಚನಗಳು
2 ಅರಸು 6:4–6ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ, ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು. ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
- ಬರಗಾಲ: ಜನರು ಹೊಲಗಳನ್ನೂ ಮನೆಗಳನ್ನೂ ಅಡವಿಡುತ್ತಾರೆ; ನೆಹೆಮೀಯನು ಬಡ್ಡಿಯನ್ನು ನಿಲ್ಲಿಸುತ್ತಾನೆನೆಹೆ 5:3–5, ನೆಹೆ 5:10–12
ವಚನಗಳು
ನೆಹೆ 5:3–5ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು. ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು. ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
ನೆಹೆ 5:10–12ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ. ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು. ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
- ಸಾಲಕ್ಕಾಗಿ ಬಡ ಕುಟುಂಬದ ಮೊಲೆಕೂಸನ್ನು ಕಿತ್ತುಕೊಳ್ಳಲಾಗುತ್ತದೆಯೋಬ 24:9
ವಚನಗಳು
ಯೋಬ 24:9ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.
- ಒತ್ತೆಯಾಗಿ ತೆಗೆದುಕೊಂಡ ವಸ್ತ್ರಗಳುಯೋಬ 22:6, ಆಮೋ 2:8
- ಸಾಮ್ಯ: ಹತ್ತು ಸಾವಿರ ತಲಾಂತು ಸಾಲವಿದ್ದ ಆಳುಮತ್ತಾ 18:23–34
ವಚನಗಳು
ಮತ್ತಾ 18:23–34ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು. ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು. ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ, ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
- ಸಾಮ್ಯ: ಐನೂರು ಮತ್ತು ಐವತ್ತು ದಿನಾರಿ ಸಾಲವಿದ್ದ ಇಬ್ಬರು ಸಾಲಗಾರರುಲೂಕ 7:41–42
ವಚನಗಳು
ಲೂಕ 7:41–42ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,
- ನ್ಯಾಯಸ್ಥಾನಕ್ಕೆ ಹೋಗುವ ದಾರಿಯಲ್ಲೇ ನಿನ್ನ ಎದುರಾಳಿಯೊಂದಿಗೆ ರಾಜಿಮಾಡಿಕೋಮತ್ತಾ 5:25–26
ವಚನಗಳು
ಮತ್ತಾ 5:25–26“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
- ತಿರುಗಿ ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿಲೂಕ 6:34–35
ವಚನಗಳು
ಲೂಕ 6:34–35ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ. ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
- ಪೌಲನು ಫಿಲೆಮೋನನಿಗೆ: “ಅದನ್ನು ನನ್ನ ಲೆಕ್ಕಕ್ಕೆ ಹಾಕು”; ನಾನೇ ಕೊಟ್ಟು ತೀರಿಸುತ್ತೇನೆಫಿಲೆ 1:18–19
ವಚನಗಳು
ಫಿಲೆ 1:18–19ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು. ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು