Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಮೋಸಗಳು ಮತ್ತು ವೇಷಾಂತರಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಮೋಸಗಳು ಮತ್ತು ವೇಷಾಂತರಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 45 ವಾಕ್ಯಭಾಗಗಳು, ಸಾಲು ಸಾಲಾಗಿ.

ಆದಿಕಾಂಡದಲ್ಲಿ

  • ಸರ್ಪವು ಸ್ತ್ರೀಗೆ ಹೇಳುತ್ತದೆ: ‘ನೀವು ನಿಶ್ಚಯವಾಗಿ ಸಾಯುವುದಿಲ್ಲ’ಆದಿ 3:4
    ವಚನಗಳು
    ಆದಿ 3:4ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
  • ತಾನು ಅವನ ತಂಗಿಯೆಂದು ಹೇಳಬೇಕೆಂದು ಅಬ್ರಾಮನು ಸಾರಯಳನ್ನು ಕೇಳುತ್ತಾನೆಆದಿ 12:13
    ವಚನಗಳು
    ಆದಿ 12:13ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
  • ಗೆರಾರಿನಲ್ಲಿ ಅಬ್ರಹಾಮನು ಮತ್ತೆ ಸಾರಳನ್ನು ತನ್ನ ತಂಗಿಯೆಂದು ಹೇಳುತ್ತಾನೆಆದಿ 20:2
    ವಚನಗಳು
    ಆದಿ 20:2ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
  • ಜನರು ತನ್ನನ್ನು ಕೊಂದಾರೆಂಬ ಭಯದಿಂದ ಇಸಾಕನು ರೆಬೆಕ್ಕಳನ್ನು ತನ್ನ ತಂಗಿಯೆಂದು ಹೇಳುತ್ತಾನೆಆದಿ 26:7
    ವಚನಗಳು
    ಆದಿ 26:7ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.
  • ರೆಬೆಕ್ಕಳು ಯಾಕೋಬನಿಗೆ ಏಸಾವನ ವಸ್ತ್ರಗಳನ್ನೂ ಆಡಿನ ಚರ್ಮಗಳನ್ನೂ ತೊಡಿಸುತ್ತಾಳೆಆದಿ 27:15–16
    ವಚನಗಳು
    ಆದಿ 27:15–16ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.
  • ಕಣ್ಣು ಕಾಣದ ತಂದೆಗೆ ಯಾಕೋಬನು ಹೇಳುತ್ತಾನೆ: ‘ನಾನು ನಿನ್ನ ಹಿರೀಮಗನಾದ ಏಸಾವನು’ಆದಿ 27:1, ಆದಿ 27:19
    ವಚನಗಳು
    ಆದಿ 27:1ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.
    ಆದಿ 27:19ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
  • ಲಾಬಾನನು ರಾಹೇಲಳ ಬದಲು ಲೇಯಳನ್ನು ಕೊಡುತ್ತಾನೆ; ಯಾಕೋಬನು: ‘ಯಾಕೆ ನನಗೆ ಮೋಸ ಮಾಡಿದೆ’ಆದಿ 29:23, ಆದಿ 29:25
    ವಚನಗಳು
    ಆದಿ 29:23ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.
    ಆದಿ 29:25ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,
  • ಯಾಕೋಬನು ಲಾಬಾನನಿಗೆ ಹೇಳದೆ ಗುಟ್ಟಾಗಿ ಹೊರಟುಹೋಗುತ್ತಾನೆಆದಿ 31:20
    ವಚನಗಳು
    ಆದಿ 31:20ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.
  • ರಾಹೇಲಳು ಲಾಬಾನನ ಮನೆಯ ವಿಗ್ರಹಗಳನ್ನು ತಡಿಯಲ್ಲಿ ಅಡಗಿಸಿ ಅವುಗಳ ಮೇಲೆ ಕುಳಿತುಕೊಳ್ಳುತ್ತಾಳೆಆದಿ 31:34–35
    ವಚನಗಳು
    ಆದಿ 31:34–35ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
  • ಯಾಕೋಬನ ಮಕ್ಕಳು ಶೆಕೆಮಿನವರಿಗೆ ಸುನ್ನತಿ ಮಾಡಿಸಿಕೊಳ್ಳಲು ಹೇಳಿ, ಆ ಮೇಲೆ ಪಟ್ಟಣದ ಮೇಲೆ ಬೀಳುತ್ತಾರೆಆದಿ 34:13, ಆದಿ 34:15, ಆದಿ 34:25
    ವಚನಗಳು
    ಆದಿ 34:13ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
    ಆದಿ 34:15ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
    ಆದಿ 34:25ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
  • ಅಣ್ಣಂದಿರು ಯೋಸೇಫನ ನಿಲುವಂಗಿಯನ್ನು ಆಡಿನ ರಕ್ತದಲ್ಲಿ ಅದ್ದಿ ಯಾಕೋಬನಿಗೆ ತೋರಿಸುತ್ತಾರೆಆದಿ 37:31–33
    ವಚನಗಳು
    ಆದಿ 37:31–33ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ, ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು. ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
  • ತಾಮಾರಳು ಮುಸುಕು ಹಾಕಿಕೊಳ್ಳುತ್ತಾಳೆ, ಯೆಹೂದನು ಅವಳನ್ನು ವೇಶ್ಯೆಯೆಂದು ಭಾವಿಸುತ್ತಾನೆಆದಿ 38:14–15
    ವಚನಗಳು
    ಆದಿ 38:14–15ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು. ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.
  • ಯೋಸೇಫನು ತನ್ನ ಬೆಳ್ಳಿಯ ಬಟ್ಟಲನ್ನು ಬೆನ್ಯಾಮೀನನ ಚೀಲದಲ್ಲಿ ಅಡಗಿಸಿಡಿಸುತ್ತಾನೆಆದಿ 44:1–2
    ವಚನಗಳು
    ಆದಿ 44:1–2ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ. ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.

ನ್ಯಾಯಸ್ಥಾಪಕರು ಮತ್ತು ಅರಸರು

  • ಗಿಬ್ಯೋನ್ಯರು ಹಳೆಯ ಚೀಲಗಳನ್ನೂ ಬೂಷ್ಟು ಹಿಡಿದ ರೊಟ್ಟಿಯನ್ನೂ ತಂದು ತಾವು ದೂರದೇಶದವರೆಂದು ಹೇಳುತ್ತಾರೆಯೆಹೋ 9:4–6
    ವಚನಗಳು
    ಯೆಹೋ 9:4–6ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು, ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು. ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
  • ಒಪ್ಪಂದದ ಮೂರು ದಿನಗಳ ನಂತರ ಅವರು ನೆರೆಯವರೆಂದು ಇಸ್ರಾಯೇಲರಿಗೆ ತಿಳಿಯಿತುಯೆಹೋ 9:16
    ವಚನಗಳು
    ಯೆಹೋ 9:16ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.
  • ಯಾಯೇಲಳು ಸೀಸೆರನನ್ನು ಒಳಗೆ ಕರೆದು, ಹಾಲು ಕೊಟ್ಟು, ಅವನು ನಿದ್ರಿಸುವಾಗ ಅವನನ್ನು ಕೊಲ್ಲುತ್ತಾಳೆನ್ಯಾಯ 4:18–21
    ವಚನಗಳು
    ನ್ಯಾಯ 4:18–21ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು. ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು. ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು. ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
  • ಮೀಕಲಳು ದಾವೀದನ ಹಾಸಿಗೆಯಲ್ಲಿ ಆಡಿನ ಕೂದಲಿನೊಂದಿಗೆ ಒಂದು ವಿಗ್ರಹವನ್ನು ಮಲಗಿಸಿ ಅವನಿಗೆ ಸ್ವಸ್ಥವಿಲ್ಲವೆಂದು ಹೇಳುತ್ತಾಳೆ1 ಸಮು 19:13–16
    ವಚನಗಳು
    1 ಸಮು 19:13–16ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು. ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು. ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು. ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.
  • ತಾನು ಅರಸನ ಗುಪ್ತ ಕಾರ್ಯದ ಮೇಲೆ ಬಂದಿದ್ದೇನೆಂದು ದಾವೀದನು ನೋಬಿನ ಯಾಜಕನಿಗೆ ಹೇಳುತ್ತಾನೆ1 ಸಮು 21:1–2
    ವಚನಗಳು
    1 ಸಮು 21:1–2ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು. ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.
  • ದಾವೀದನು ಗೆಷೂರ್ಯರ ಮೇಲೆ ದಾಳಿಮಾಡಿ, ಯೆಹೂದದ ದಕ್ಷಿಣ ಸೀಮೆಯ ಮೇಲೆ ದಾಳಿಮಾಡಿದೆನೆಂದು ಆಕೀಷನಿಗೆ ಹೇಳುತ್ತಾನೆ1 ಸಮು 27:8, 1 ಸಮು 27:10
    ವಚನಗಳು
    1 ಸಮು 27:8ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
    1 ಸಮು 27:10ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.
  • ತಾಮಾರಳು ತನ್ನ ಬಳಿಗೆ ಬರಲೆಂದು ಅಮ್ನೋನನು ಅಸ್ವಸ್ಥನಂತೆ ನಟಿಸುತ್ತಾನೆ2 ಸಮು 13:6
    ವಚನಗಳು
    2 ಸಮು 13:6ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.
  • ಗೋಳಾಡುವವಳಂತೆ ನಟಿಸಲು ಯೋವಾಬನು ತೆಕೋವದಿಂದ ಒಬ್ಬ ಜ್ಞಾನಿಯಾದ ಸ್ತ್ರೀಯನ್ನು ಕಳುಹಿಸುತ್ತಾನೆ2 ಸಮು 14:2–3
    ವಚನಗಳು
    2 ಸಮು 14:2–3ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ, ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.
  • ಹರಕೆಗಾಗಿ ಹೆಬ್ರೋನಿಗೆ ಹೋಗಲು ಅಬ್ಷಾಲೋಮನು ಅಪ್ಪಣೆ ಕೇಳಿ ಅಲ್ಲಿ ದಂಗೆಯನ್ನು ಆರಂಭಿಸುತ್ತಾನೆ2 ಸಮು 15:7, 2 ಸಮು 15:10
    ವಚನಗಳು
    2 ಸಮು 15:7ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
    2 ಸಮು 15:10ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
  • ದಾವೀದನ ಸ್ನೇಹಿತನಾದ ಹೂಷೈ ಅಬ್ಷಾಲೋಮನನ್ನು ವಂದಿಸುತ್ತಾನೆ: ‘ಅರಸನು ಚಿರಂಜೀವಿಯಾಗಿರಲಿ’2 ಸಮು 16:16
    ವಚನಗಳು
    2 ಸಮು 16:16ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.
  • ಅಬ್ಷಾಲೋಮನು ಅಹೀತೋಫೆಲನ ಸಲಹೆಗಿಂತ ಹೂಷೈಯ ಸಲಹೆಯನ್ನು ಮೆಚ್ಚುತ್ತಾನೆ2 ಸಮು 17:14
    ವಚನಗಳು
    2 ಸಮು 17:14ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
  • ದೇವರ ಮನುಷ್ಯನನ್ನು ತನ್ನ ಮನೆಗೆ ಹಿಂದಕ್ಕೆ ಕರೆತರಲು ಒಬ್ಬ ವೃದ್ಧ ಪ್ರವಾದಿಯು ಸುಳ್ಳು ಹೇಳುತ್ತಾನೆ1 ಅರಸು 13:18
    ವಚನಗಳು
    1 ಅರಸು 13:18ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
  • ಯಾರೊಬ್ಬಾಮನ ಹೆಂಡತಿ ವೇಷಮರೆಸಿಕೊಂಡು ಹೋಗುತ್ತಾಳೆ; ಕಣ್ಣು ಕಾಣದ ಅಹೀಯನು ಅವಳನ್ನು ಹೆಸರಿನಿಂದ ವಂದಿಸುತ್ತಾನೆ1 ಅರಸು 14:2, 1 ಅರಸು 14:4, 1 ಅರಸು 14:6
    ವಚನಗಳು
    1 ಅರಸು 14:2ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
    1 ಅರಸು 14:4ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.
    1 ಅರಸು 14:6ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.
  • ನಾಮಾನನಿಂದ ಬೆಳ್ಳಿಯನ್ನು ಪಡೆಯಲು ಗೇಹಜಿಯು ಎಲೀಷನಿಂದ ಬಂದ ಸಂದೇಶವನ್ನು ಕಲ್ಪಿಸಿ ಹೇಳುತ್ತಾನೆ2 ಅರಸು 5:22, 2 ಅರಸು 5:25
    ವಚನಗಳು
    2 ಅರಸು 5:22ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.
    2 ಅರಸು 5:25ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.
  • ಬಾಳನ ಸೇವಕರನ್ನು ಕೂಡಿಸಲು ಯೇಹುವು ಬಾಳನಿಗೆ ದೊಡ್ಡ ಯಜ್ಞವನ್ನು ಪ್ರಕಟಿಸುತ್ತಾನೆ2 ಅರಸು 10:19
    ವಚನಗಳು
    2 ಅರಸು 10:19ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
  • ಕೇಡುಮಾಡಬೇಕೆಂದು ಯೋಚಿಸಿ ಸನ್ಬಲ್ಲಟನು ನೆಹೆಮೀಯನನ್ನು ಓನೋ ಬಯಲಿಗೆ ಕರೆಯುತ್ತಾನೆನೆಹೆ 6:2
    ವಚನಗಳು
    ನೆಹೆ 6:2ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.
  • ಕೂಲಿಗೆ ಗೊತ್ತುಮಾಡಲ್ಪಟ್ಟ ಒಬ್ಬನು ದೇವಾಲಯದಲ್ಲಿ ಅಡಗಿಕೊಳ್ಳುವಂತೆ ನೆಹೆಮೀಯನನ್ನು ಒತ್ತಾಯಿಸುತ್ತಾನೆನೆಹೆ 6:10, ನೆಹೆ 6:12
    ವಚನಗಳು
    ನೆಹೆ 6:10ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.
    ನೆಹೆ 6:12ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.

ಹೊಸ ಒಡಂಬಡಿಕೆಯಲ್ಲಿ

  • ತಾನೂ ಬಂದು ಮಗುವನ್ನು ಆರಾಧಿಸಬೇಕೆಂದಿದ್ದೇನೆ ಎಂದು ಹೆರೋದನು ಜ್ಞಾನಿಗಳಿಗೆ ಹೇಳುತ್ತಾನೆಮತ್ತಾ 2:8
    ವಚನಗಳು
    ಮತ್ತಾ 2:8“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
  • ಯೇಸುವನ್ನು ಉಪಾಯದಿಂದ ಹಿಡಿಯಲು ಮುಖ್ಯಯಾಜಕರು ದಾರಿ ಹುಡುಕುತ್ತಾರೆಮಾರ್ಕ 14:1
    ವಚನಗಳು
    ಮಾರ್ಕ 14:1ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
  • ಶಿಷ್ಯರು ದೇಹವನ್ನು ಕದ್ದುಕೊಂಡು ಹೋದರೆಂದು ಹೇಳಲು ಸೈನಿಕರಿಗೆ ಹಣ ಕೊಡಲಾಗುತ್ತದೆಮತ್ತಾ 28:12–13
    ವಚನಗಳು
    ಮತ್ತಾ 28:12–13ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, “‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
  • ಅನನೀಯನೂ ಸಪ್ಫೈರಳೂ ತಮ್ಮ ಭೂಮಿಯ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಳ್ಳುತ್ತಾರೆಅ. ಕೃ 5:1–2, ಅ. ಕೃ 5:8
    ವಚನಗಳು
    ಅ. ಕೃ 5:1–2ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
    ಅ. ಕೃ 5:8ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು