Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಜಿಂಕೆಗಳು ಮತ್ತು ಹರಿಣಗಳು

ಪ್ರಕೃತಿ

ಬೈಬಲಿನಲ್ಲಿ ಜಿಂಕೆಗಳು ಮತ್ತು ಹರಿಣಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 19 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಶುದ್ಧರೂ ಅಶುದ್ಧರೂ ಜಿಂಕೆಗಳನ್ನೂ ಹರಿಣಗಳನ್ನೂ ತಿನ್ನಬಹುದುಧರ್ಮೋ 12:15, ಧರ್ಮೋ 14:5
    ವಚನಗಳು
    ಧರ್ಮೋ 12:15ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.
    ಧರ್ಮೋ 14:5ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.
  • ಸೊಲೊಮೋನನ ಮೇಜಿಗೆ ಜಿಂಕೆಗಳನ್ನೂ ಹರಿಣಗಳನ್ನೂ ಕಡವೆಗಳನ್ನೂ ಒದಗಿಸಲಾಗುತ್ತಿತ್ತು1 ಅರಸು 4:22–23
    ವಚನಗಳು
    1 ಅರಸು 4:22–23ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
  • ಯೋಬನು: ಹರಿಣಿಯು ಬಾಗಿ ಮರಿಯನ್ನು ಈಯುತ್ತದೆ; ಮರಿಗಳು ಬಯಲಿನಲ್ಲಿ ಬೆಳೆಯುತ್ತವೆಯೋಬ 39:1–4
    ವಚನಗಳು
    ಯೋಬ 39:1–4ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ? ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ? ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು. ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ.
  • ಬರದಲ್ಲಿ ಹುಲ್ಲಿಲ್ಲದ್ದರಿಂದ ಹರಿಣಿಯು ಹೊಸದಾಗಿ ಹುಟ್ಟಿದ ತನ್ನ ಮರಿಯನ್ನು ಬಿಟ್ಟುಹೋಗುತ್ತದೆಯೆರೆ 14:5
    ವಚನಗಳು
    ಯೆರೆ 14:5ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
  • “ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ”ಕೀರ್ತ 42:1
    ವಚನಗಳು
    ಕೀರ್ತ 42:1ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
  • ಮೇವು ಸಿಗದ ಜಿಂಕೆಗಳಿಗೆ ಬೇಟೆಗಾರನಿಂದ ಓಡಿಹೋಗುವ ಬಲವಿಲ್ಲಪ್ರಲಾ 1:6
    ವಚನಗಳು
    ಪ್ರಲಾ 1:6ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.
  • ಹರಿಣವು ಬೇಟೆಗಾರನ ಕೈಯಿಂದ ತಪ್ಪಿಸಿಕೊಳ್ಳುತ್ತದೆಜ್ಞಾನೋ 6:5
    ವಚನಗಳು
    ಜ್ಞಾನೋ 6:5ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.

ನುಡಿಗಳು

  • ಅಸಾಹೇಲನು ಕಾಡಿನ ಹರಿಣದಂತೆ ವೇಗವಾಗಿ ಓಡುವವನಾಗಿದ್ದನು2 ಸಮು 2:18
    ವಚನಗಳು
    2 ಸಮು 2:18ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
  • ಗಾದ್ಯ ಯುದ್ಧವೀರರು ಬೆಟ್ಟದ ಜಿಂಕೆಗಳಂತೆ ಚುರುಕಾಗಿದ್ದರು1 ಪೂರ್ವ 12:8
    ವಚನಗಳು
    1 ಪೂರ್ವ 12:8ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:
  • ಉನ್ನತಪ್ರದೇಶಗಳಲ್ಲಿ “ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ”2 ಸಮು 22:34, ಕೀರ್ತ 18:33, ಹಬ 3:19
    ವಚನಗಳು
    2 ಸಮು 22:34ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
    ಕೀರ್ತ 18:33ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
    ಹಬ 3:19ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
  • “ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ”ಜ್ಞಾನೋ 5:19
    ವಚನಗಳು
    ಜ್ಞಾನೋ 5:19ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
  • ಪ್ರಿಯನು, ಬೆಟ್ಟಗಳ ಮೇಲಿನ ಹರಿಣದಂತೆ ಅಥವಾ ಎಳೆಯ ಜಿಂಕೆಯಂತೆಪ.ಗೀ 2:9, ಪ.ಗೀ 2:17, ಪ.ಗೀ 8:14
    ವಚನಗಳು
    ಪ.ಗೀ 2:9ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
    ಪ.ಗೀ 2:17ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.
    ಪ.ಗೀ 8:14ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.
  • “ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ”ಪ.ಗೀ 2:7
    ವಚನಗಳು
    ಪ.ಗೀ 2:7ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
  • “ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ”ಆದಿ 49:21
    ವಚನಗಳು
    ಆದಿ 49:21ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು