ಅನ್ವೇಷಿಸಿ › ವಿಷಯಗಳು › ಮುಂಜಾನೆಯ ಇಬ್ಬನಿ
ಪ್ರಕೃತಿ
ಬೈಬಲಿನಲ್ಲಿ ಮುಂಜಾನೆಯ ಇಬ್ಬನಿ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 22 ವಾಕ್ಯಭಾಗಗಳು, ಸಾಲು ಸಾಲಾಗಿ.
- ರಾತ್ರಿಯಲ್ಲಿ ಪಾಳೆಯದ ಮೇಲೆ ಇಬ್ಬನಿ ಬೀಳುತ್ತಿತ್ತು, ಅದರೊಂದಿಗೆ ಮನ್ನವೂಅರಣ್ಯ 11:9
ವಚನಗಳು
ಅರಣ್ಯ 11:9ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
- ಮುಂಜಾನೆಯ ಇಬ್ಬನಿ ಆರಿಹೋದಾಗ ನೆಲದ ಮೇಲೆ ತೆಳುವಾದ ಚೂರುಗಳಿದ್ದವುವಿಮೋ 16:13–14
ವಚನಗಳು
ವಿಮೋ 16:13–14ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.
- ಕೊಂಬೆಗಳ ಮೇಲೆ ರಾತ್ರಿಯೆಲ್ಲಾ ಇಬ್ಬನಿ ಇರುತ್ತದೆಯೋಬ 29:19
ವಚನಗಳು
ಯೋಬ 29:19ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.
- ಮೋಡಗಳು ಇಬ್ಬನಿಯನ್ನು ಸುರಿಸಿದವುಜ್ಞಾನೋ 3:20
ವಚನಗಳು
ಜ್ಞಾನೋ 3:20ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
- “ಮಂಜಿನ ಹನಿಗಳನ್ನು ಪಡೆದವನು ಯಾರು?”ಯೋಬ 38:28
ವಚನಗಳು
ಯೋಬ 38:28ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?
- ರಾತ್ರಿಯಲ್ಲಿ ಪ್ರಿಯನು: “ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ”ಪ.ಗೀ 5:2
ವಚನಗಳು
ಪ.ಗೀ 5:2ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
- ನೆಬೂಕದ್ನೆಚ್ಚರನು ಆಕಾಶದ ಇಬ್ಬನಿಯಿಂದ ತೋಯಿಸಲ್ಪಟ್ಟನುದಾನಿ 4:33
ವಚನಗಳು
ದಾನಿ 4:33ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
- ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಇಬ್ಬನಿಕೀರ್ತ 133:3
ವಚನಗಳು
ಕೀರ್ತ 133:3ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
ಕಥೆಗಳಲ್ಲಿ
- ಗಿದ್ಯೋನನು ಉಣ್ಣೆಯ ತುಪ್ಪಟದಿಂದ ಒಂದು ಬಟ್ಟಲು ತುಂಬಾ ನೀರನ್ನು ಹಿಂಡಿದನುನ್ಯಾಯ 6:37–38
ವಚನಗಳು
ನ್ಯಾಯ 6:37–38ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು. ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
- ಮರುದಿನ ರಾತ್ರಿ ತುಪ್ಪಟವು ಒಣಗಿತ್ತು, ನೆಲದ ಮೇಲೆಲ್ಲಾ ಇಬ್ಬನಿ ಬಿದ್ದಿತ್ತುನ್ಯಾಯ 6:39–40
ವಚನಗಳು
ನ್ಯಾಯ 6:39–40ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು. ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
- ಎಲೀಯನು ಅಹಾಬನಿಗೆ: ಈ ವರ್ಷಗಳಲ್ಲಿ ಮಂಜಾಗಲಿ ಮಳೆಯಾಗಲಿ ಇರುವುದಿಲ್ಲ1 ಅರಸು 17:1
ವಚನಗಳು
1 ಅರಸು 17:1ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
- ದಾವೀದನ ಶೋಕಗೀತೆ: “ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು” ಇಲ್ಲದೆ ಹೋಗಲಿ2 ಸಮು 1:21
ವಚನಗಳು
2 ಸಮು 1:21ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
- ಹಗ್ಗಾಯನು: ಆಕಾಶವು ತನ್ನ ಇಬ್ಬನಿಯನ್ನೂ ಭೂಮಿಯು ತನ್ನ ಬೆಳೆಯನ್ನೂ ತಡೆಹಿಡಿದವುಹಗ್ಗಾ 1:10
ವಚನಗಳು
ಹಗ್ಗಾ 1:10ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
ಆಶೀರ್ವಾದಗಳು
- ಇಸಾಕನ ಆಶೀರ್ವಾದ: ಆಕಾಶದ ಇಬ್ಬನಿಯೂ ಭೂಮಿಯ ಸಾರವೂಆದಿ 27:28
ವಚನಗಳು
ಆದಿ 27:28ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
- ಏಸಾವನು ಆಕಾಶದ ಇಬ್ಬನಿಯಿಂದ ದೂರವಾಗಿ ವಾಸಿಸುವನುಆದಿ 27:39
ವಚನಗಳು
ಆದಿ 27:39ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.
- ಮೋಶೆಯು: ಯೋಸೇಫನ ದೇಶವು ಆಕಾಶದ ಶ್ರೇಷ್ಠವಾದ ಇಬ್ಬನಿಯಿಂದ ಆಶೀರ್ವದಿಸಲ್ಪಟ್ಟಿದೆಧರ್ಮೋ 33:13
ವಚನಗಳು
ಧರ್ಮೋ 33:13ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
- ಆಕಾಶವು ಇಬ್ಬನಿಯನ್ನು ಸುರಿಸುವ ಧಾನ್ಯದ ಮತ್ತು ಹೊಸ ದ್ರಾಕ್ಷಾರಸದ ದೇಶಧರ್ಮೋ 33:28
ವಚನಗಳು
ಧರ್ಮೋ 33:28ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
ನುಡಿಗಳು
- “ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ”ಹೋಶೇ 6:4, ಹೋಶೇ 13:3
ವಚನಗಳು
ಹೋಶೇ 6:4ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
ಹೋಶೇ 13:3ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
- ಅರಸನ ದಯೆ: “ಅವನ ದಯೆಯು ಪೈರಿನ ಇಬ್ಬನಿ”ಜ್ಞಾನೋ 19:12
ವಚನಗಳು
ಜ್ಞಾನೋ 19:12ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
- “ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ”2 ಸಮು 17:12
ವಚನಗಳು
2 ಸಮು 17:12ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
- “ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ”ಯೆಶಾ 18:4
ವಚನಗಳು
ಯೆಶಾ 18:4ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು