Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕನಸುಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಕನಸುಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 36 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಹಸಿದವನು ಊಟಮಾಡುತ್ತಿರುವಂತೆ ಕನಸು ಕಾಣುತ್ತಾನೆ, ಎಚ್ಚರವಾದಾಗ ಹಸಿದೇ ಇರುತ್ತಾನೆಯೆಶಾ 29:8
    ವಚನಗಳು
    ಯೆಶಾ 29:8ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
  • ಬಹಳ ಚಿಂತೆಯಿಂದ ಕನಸು ಬರುತ್ತದೆಪ್ರಸ 5:3
    ವಚನಗಳು
    ಪ್ರಸ 5:3ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.
  • ಅನ್ಯದೇವತೆಗಳನ್ನು ಸೇವಿಸಲು ಪ್ರೇರೇಪಿಸುವ ಕನಸುಗಾರನ ಬಗ್ಗೆ ಧರ್ಮಶಾಸ್ತ್ರಧರ್ಮೋ 13:1–5
    ವಚನಗಳು
    ಧರ್ಮೋ 13:1–5ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು. ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
  • ‘ನನಗೆ ಕನಸು ಬಿತ್ತು, ಕನಸು ಬಿತ್ತು’ ಎಂದು ಹೇಳುತ್ತಲೇ ಇರುವ ಪ್ರವಾದಿಗಳ ಬಗ್ಗೆ ಯೆರೆಮೀಯನುಯೆರೆ 23:25–28
    ವಚನಗಳು
    ಯೆರೆ 23:25–28ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ. ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.

ಬೈಬಲಿನಲ್ಲಿ ಹೇಳಲಾದ ಕನಸುಗಳು

  • ಸಾರಳ ವಿಷಯದಲ್ಲಿ ಅಬೀಮೆಲೆಕನಿಗೆ ಕನಸಿನಲ್ಲಿ ಎಚ್ಚರಿಕೆಆದಿ 20:3
    ವಚನಗಳು
    ಆದಿ 20:3ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
  • ಆಕಾಶವನ್ನು ಮುಟ್ಟುವ ಏಣಿಯ ಕನಸನ್ನು ಯಾಕೋಬನು ಕಾಣುತ್ತಾನೆಆದಿ 28:12
    ವಚನಗಳು
    ಆದಿ 28:12ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
  • ಪಟ್ಟೆಪಟ್ಟೆಯಾದ, ಮಚ್ಚೆಮಚ್ಚೆಯಾದ, ಚುಕ್ಕೆಚುಕ್ಕೆಯಾದ ಮಂದೆಗಳ ಕನಸನ್ನು ಯಾಕೋಬನು ಕಾಣುತ್ತಾನೆಆದಿ 31:10–13
    ವಚನಗಳು
    ಆದಿ 31:10–13“ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.
  • ಯಾಕೋಬನಿಗೆ ಕೇಡುಮಾಡಬಾರದೆಂದು ಲಾಬಾನನಿಗೆ ಕನಸಿನಲ್ಲಿ ಎಚ್ಚರಿಕೆಆದಿ 31:24
    ವಚನಗಳು
    ಆದಿ 31:24ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.
  • ತನ್ನ ಸಿವುಡಿಗೆ ಸಿವುಡುಗಳು ಅಡ್ಡಬೀಳುವ ಕನಸನ್ನು ಯೋಸೇಫನು ಕಾಣುತ್ತಾನೆಆದಿ 37:5–8
    ವಚನಗಳು
    ಆದಿ 37:5–8ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ. ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು. ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
  • ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ಅಡ್ಡಬೀಳುವ ಕನಸನ್ನು ಯೋಸೇಫನು ಕಾಣುತ್ತಾನೆಆದಿ 37:9–10
    ವಚನಗಳು
    ಆದಿ 37:9–10ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು. ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
  • ಪಾನದಾಯಕನು ಮೂರು ಕೊಂಬೆಗಳುಳ್ಳ ದ್ರಾಕ್ಷಿಬಳ್ಳಿಯ ಕನಸನ್ನು ಕಾಣುತ್ತಾನೆಆದಿ 40:9–13
    ವಚನಗಳು
    ಆದಿ 40:9–13ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು. ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು. ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು. ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು. ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
  • ರೊಟ್ಟಿ ಸುಡುವವನು ತನ್ನ ತಲೆಯ ಮೇಲೆ ಮೂರು ರೊಟ್ಟಿಯ ಬುಟ್ಟಿಗಳ ಕನಸನ್ನು ಕಾಣುತ್ತಾನೆಆದಿ 40:16–19
    ವಚನಗಳು
    ಆದಿ 40:16–19ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು. ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು. ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
  • ಏಳು ಕೊಬ್ಬಿದ ಮತ್ತು ಏಳು ಬಡಕಲಾದ ಹಸುಗಳ ಕನಸನ್ನು ಫರೋಹನು ಕಾಣುತ್ತಾನೆಆದಿ 41:1–4
    ವಚನಗಳು
    ಆದಿ 41:1–4ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು. ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು. ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
  • ಆ ಮೇಲೆ ಏಳು ತುಂಬಿದ ಮತ್ತು ಏಳು ಬಡಕಲಾದ ತೆನೆಗಳ ಕನಸುಆದಿ 41:5–7
    ವಚನಗಳು
    ಆದಿ 41:5–7ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು. ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು. ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
  • ಜವೆಗೋದಿಯ ರೊಟ್ಟಿಯು ಡೇರೆಯನ್ನು ಉರುಳಿಸುವ ಕನಸನ್ನು ಒಬ್ಬ ಮಿದ್ಯಾನ್ಯನು ಕಾಣುತ್ತಾನೆನ್ಯಾಯ 7:13–14
    ವಚನಗಳು
    ನ್ಯಾಯ 7:13–14ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
  • ಗಿಬ್ಯೋನಿನಲ್ಲಿ ಸೊಲೊಮೋನನು ಕನಸಿನಲ್ಲಿ ಜ್ಞಾನವನ್ನು ಕೇಳಿಕೊಳ್ಳುತ್ತಾನೆ1 ಅರಸು 3:5–15
    ವಚನಗಳು
    1 ಅರಸು 3:5–15ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು, “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ. ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು. ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ. ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು. ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು. ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ. ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು. ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
  • ಕನಸನ್ನೇ ತನಗೆ ಹೇಳಬೇಕೆಂದು ನೆಬೂಕದ್ನೆಚ್ಚರನು ತನ್ನ ಜ್ಞಾನಿಗಳನ್ನು ಒತ್ತಾಯಿಸುತ್ತಾನೆದಾನಿ 2:1–9
    ವಚನಗಳು
    ದಾನಿ 2:1–9ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು. ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು. ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು. ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು. ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು. ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು. ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು. ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು. ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
  • ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ಮಣ್ಣಿನ ದೊಡ್ಡ ಪ್ರತಿಮೆಯ ಅವನ ಕನಸುದಾನಿ 2:31–35
    ವಚನಗಳು
    ದಾನಿ 2:31–35“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು. ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ, ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
  • ಕಡಿದುಹಾಕಲ್ಪಟ್ಟ ದೊಡ್ಡ ಮರದ ಅವನ ಕನಸುದಾನಿ 4:10–17
    ವಚನಗಳು
    ದಾನಿ 4:10–17ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು. ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು. ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ. ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ, ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ! ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ. ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ. ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
  • ನಾಲ್ಕು ಮೃಗಗಳ ಕನಸನ್ನು ದಾನಿಯೇಲನು ಬರೆದಿಡುತ್ತಾನೆದಾನಿ 7:1–3
    ವಚನಗಳು
    ದಾನಿ 7:1–3ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು. ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು. ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.
  • ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳಬೇಕೆಂದು ಯೋಸೇಫನಿಗೆ ಕನಸಿನಲ್ಲಿ ಹೇಳಲಾಗುತ್ತದೆಮತ್ತಾ 1:20–21
    ವಚನಗಳು
    ಮತ್ತಾ 1:20–21ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
  • ಹೆರೋದನ ಬಳಿಗೆ ಹಿಂದಿರುಗಬಾರದೆಂದು ಜ್ಞಾನಿಗಳಿಗೆ ಕನಸಿನಲ್ಲಿ ಎಚ್ಚರಿಕೆಮತ್ತಾ 2:12
    ವಚನಗಳು
    ಮತ್ತಾ 2:12ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
  • ಐಗುಪ್ತಕ್ಕೆ ಓಡಿಹೋಗಬೇಕೆಂದೂ ಆ ಮೇಲೆ ಹಿಂದಿರುಗಬೇಕೆಂದೂ ಯೋಸೇಫನಿಗೆ ಕನಸಿನಲ್ಲಿ ಹೇಳಲಾಗುತ್ತದೆಮತ್ತಾ 2:13, ಮತ್ತಾ 2:19–22
    ವಚನಗಳು
    ಮತ್ತಾ 2:13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
    ಮತ್ತಾ 2:19–22ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು. ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
  • ಯೇಸುವಿನ ನಿಮಿತ್ತ ಪಿಲಾತನ ಹೆಂಡತಿ ಕನಸಿನಲ್ಲಿ ಬಹಳ ಕಷ್ಟಪಡುತ್ತಾಳೆಮತ್ತಾ 27:19
    ವಚನಗಳು
    ಮತ್ತಾ 27:19ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ರಾತ್ರಿಯ ದರ್ಶನಗಳು

  • ಐಗುಪ್ತಕ್ಕೆ ಇಳಿದುಹೋಗುವ ಬಗ್ಗೆ ದೇವರು ರಾತ್ರಿಯಲ್ಲಿ ಯಾಕೋಬನೊಂದಿಗೆ ಮಾತನಾಡುತ್ತಾನೆಆದಿ 46:2–4
    ವಚನಗಳು
    ಆದಿ 46:2–4ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು. ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು. ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.
  • ರಾತ್ರಿಯ ದರ್ಶನಗಳಲ್ಲಿ ಎಲೀಫಜನು ಪಿಸುಮಾತನ್ನು ಕೇಳುತ್ತಾನೆಯೋಬ 4:12–16
    ವಚನಗಳು
    ಯೋಬ 4:12–16ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು. ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ ಎಲುಬುಗಳೆಲ್ಲಾ ನಡುಗುವಷ್ಟು, ಭಯಂಕರವಾದ ದಿಗಿಲು ಉಂಟಾಯಿತು. ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯೆಲ್ಲಾ ರೋಮಾಂಚನವಾಯಿತು. ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.”
  • ಮಕೆದೋನ್ಯದ ಒಬ್ಬ ಮನುಷ್ಯನು ತಮಗೆ ನೆರವಾಗಲು ಬರಬೇಕೆಂದು ಬೇಡಿಕೊಳ್ಳುವುದನ್ನು ಪೌಲನು ಕಾಣುತ್ತಾನೆಅ. ಕೃ 16:9
    ವಚನಗಳು
    ಅ. ಕೃ 16:9ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
  • ಬಿರುಗಾಳಿಯಲ್ಲಿ ಹಡಗಿನಲ್ಲಿರುವವರೆಲ್ಲರೂ ಉಳಿಯುವರೆಂದು ದೇವದೂತನು ಪೌಲನಿಗೆ ಹೇಳುತ್ತಾನೆಅ. ಕೃ 27:23–24
    ವಚನಗಳು
    ಅ. ಕೃ 27:23–24ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.

ಅರ್ಥ ಹೇಳುವವರು

  • ಪಾನದಾಯಕನ ಮತ್ತು ರೊಟ್ಟಿ ಸುಡುವವನ ಕನಸುಗಳಿಗೆ ಯೋಸೇಫನು ಅರ್ಥ ಹೇಳುತ್ತಾನೆಆದಿ 40:8, ಆದಿ 40:12–13, ಆದಿ 40:18–19
    ವಚನಗಳು
    ಆದಿ 40:8ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
    ಆದಿ 40:12–13ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು. ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
    ಆದಿ 40:18–19ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು. ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
  • ಯೋಸೇಫನು ಫರೋಹನ ಕನಸುಗಳಿಗೆ ಅರ್ಥ ಹೇಳುತ್ತಾನೆ: ಏಳು ವರ್ಷ ಸಮೃದ್ಧಿ, ಏಳು ವರ್ಷ ಬರಆದಿ 41:25–32
    ವಚನಗಳು
    ಆದಿ 41:25–32ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ. ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ. ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ. ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು. ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು. ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು. ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು. ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
  • ದಾನಿಯೇಲನು ನೆಬೂಕದ್ನೆಚ್ಚರನಿಗೆ ಅವನ ಕನಸನ್ನು ಹೇಳಿ ಆ ಮೇಲೆ ಅದರ ಅರ್ಥವನ್ನು ವಿವರಿಸುತ್ತಾನೆದಾನಿ 2:27–30, ದಾನಿ 2:36, ದಾನಿ 4:19–24
    ವಚನಗಳು
    ದಾನಿ 2:27–30ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು. ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ. “ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ. ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
    ದಾನಿ 2:36“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
    ದಾನಿ 4:19–24ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ! “ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ, ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ, ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ. “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ. “ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು