Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕುಡುಕತನ

ದೈನಂದಿನ ಜೀವನ

ಬೈಬಲಿನಲ್ಲಿ ಕುಡುಕತನ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 30 ವಾಕ್ಯಭಾಗಗಳು, ಸಾಲು ಸಾಲಾಗಿ.

ನುಡಿಗಳು

  • ದ್ರಾಕ್ಷಾರಸವು ಪರಿಹಾಸ್ಯಮಾಡುವಂಥದ್ದು, ಮದ್ಯವು ಗಲಾಟೆಮಾಡುವಂಥದ್ದುಜ್ಞಾನೋ 20:1
    ವಚನಗಳು
    ಜ್ಞಾನೋ 20:1ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
  • ಯಾರ ಕಣ್ಣುಗಳು ಕೆಂಪಾಗಿವೆ? ದ್ರಾಕ್ಷಾರಸದ ಬಳಿ ತಡಮಾಡುವವರದುಜ್ಞಾನೋ 23:29–35
    ವಚನಗಳು
    ಜ್ಞಾನೋ 23:29–35ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು? ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ. ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ. ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ. ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
  • ಕುಡುಕನೂ ಹೊಟ್ಟೆಬಾಕನೂ ಬಡತನಕ್ಕೆ ಬರುವರುಜ್ಞಾನೋ 23:20–21
    ವಚನಗಳು
    ಜ್ಞಾನೋ 23:20–21ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು. ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
  • ದ್ರಾಕ್ಷಾರಸವನ್ನು ಕುಡಿಯುವುದು ಅರಸರಿಗೆ ತಕ್ಕದ್ದಲ್ಲಜ್ಞಾನೋ 31:4–7
    ವಚನಗಳು
    ಜ್ಞಾನೋ 31:4–7ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು. ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು. ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
  • ಮದ್ಯಕ್ಕಾಗಿ ಮುಂಜಾನೆ ಎದ್ದು ಓಡುವವರಿಗೆ ಅಯ್ಯೋಯೆಶಾ 5:11–12
    ವಚನಗಳು
    ಯೆಶಾ 5:11–12ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
  • “ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ”ಯೆಶಾ 5:22
    ವಚನಗಳು
    ಯೆಶಾ 5:22ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
  • ಯಾಜಕರೂ ಪ್ರವಾದಿಗಳೂ ಮದ್ಯದಿಂದ ತೂರಾಡುತ್ತಾರೆಯೆಶಾ 28:7–8
    ವಚನಗಳು
    ಯೆಶಾ 28:7–8ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ. ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.
  • “ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು”ಯೆಶಾ 56:12
    ವಚನಗಳು
    ಯೆಶಾ 56:12“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.
  • ದ್ರಾಕ್ಷಾರಸವು ವಿವೇಕವನ್ನು ಕಸಿದುಕೊಳ್ಳುತ್ತದೆಹೋಶೇ 4:11
    ವಚನಗಳು
    ಹೋಶೇ 4:11ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
  • ಬಟ್ಟಲುಗಟ್ಟಲೆ ದ್ರಾಕ್ಷಾರಸವನ್ನು ಕುಡಿಯುವುದುಆಮೋ 6:6
    ವಚನಗಳು
    ಆಮೋ 6:6ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
  • ತನ್ನ ನೆರೆಯವರನ್ನು ಅಮಲೇರಿಸುವವನಿಗೆ ಅಯ್ಯೋಹಬ 2:15
    ವಚನಗಳು
    ಹಬ 2:15‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
  • ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ1 ಥೆಸ 5:7
    ವಚನಗಳು
    1 ಥೆಸ 5:7ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
  • ದ್ರಾಕ್ಷಾರಸವನ್ನು ಕುಡಿದು ಅಮಲೇರಬೇಡಿರಿಎಫೆ 5:18, ರೋಮಾ 13:13, ಲೂಕ 21:34
    ವಚನಗಳು
    ಎಫೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
    ರೋಮಾ 13:13ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
    ಲೂಕ 21:34“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.

ಧರ್ಮಶಾಸ್ತ್ರದಲ್ಲಿ

  • ತಂದೆತಾಯಿಗಳು ಮಗನ ಮೇಲೆ ಹಿರಿಯರ ಮುಂದೆ ದೂರು ಹೇಳಬಹುದು: “ಕುಡುಕ ಮತ್ತು ಹೊಟ್ಟೆಬಾಕ”ಧರ್ಮೋ 21:20
    ವಚನಗಳು
    ಧರ್ಮೋ 21:20ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
  • ದೇವದರ್ಶನದ ಗುಡಾರದೊಳಗೆ ಬರುವಾಗ ಯಾಜಕರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲಯಾಜ 10:9
    ವಚನಗಳು
    ಯಾಜ 10:9“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
  • ನಾಜೀರನು ದ್ರಾಕ್ಷಾರಸದಿಂದಲೂ ಮದ್ಯದಿಂದಲೂ ದೂರವಿರುತ್ತಾನೆಅರಣ್ಯ 6:3
    ವಚನಗಳು
    ಅರಣ್ಯ 6:3ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.

ಉದಾಹರಣೆಗಳು

  • ನೋಹನು ದ್ರಾಕ್ಷಿತೋಟವನ್ನು ಮಾಡಿ ಅಮಲೇರುತ್ತಾನೆಆದಿ 9:20–21
    ವಚನಗಳು
    ಆದಿ 9:20–21ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ. ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
  • ಲೋಟನ ಹೆಣ್ಣುಮಕ್ಕಳು ತಮ್ಮ ತಂದೆಗೆ ಅಮಲೇರಿಸುತ್ತಾರೆಆದಿ 19:32–33
    ವಚನಗಳು
    ಆದಿ 19:32–33ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
  • ತನ್ನ ಔತಣದಲ್ಲಿ ಬಹಳವಾಗಿ ಅಮಲೇರಿದ್ದ ನಾಬಾಲನು ಬೆಳಗಿನ ತನಕ ಏನೂ ಕೇಳುವುದಿಲ್ಲ1 ಸಮು 25:36–37
    ವಚನಗಳು
    1 ಸಮು 25:36–37ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ. ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.
  • ದಾವೀದನು ಊರೀಯನನ್ನು ಅಮಲೇರಿಸುತ್ತಾನೆ, ಆದರೂ ಊರೀಯನು ಮನೆಗೆ ಹೋಗುವುದಿಲ್ಲ2 ಸಮು 11:13
    ವಚನಗಳು
    2 ಸಮು 11:13ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
  • ಅಮ್ನೋನನ ಹೃದಯವು ದ್ರಾಕ್ಷಾರಸದಿಂದ ಉಲ್ಲಾಸಗೊಳ್ಳುವ ತನಕ ಅಬ್ಷಾಲೋಮನು ಕಾಯುತ್ತಾನೆ2 ಸಮು 13:28
    ವಚನಗಳು
    2 ಸಮು 13:28ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
  • ಅಮಲೇರುತ್ತಿದ್ದಾಗ ಅರಸನಾದ ಏಲನನ್ನು ಜಿಮ್ರಿಯು ಕೊಲ್ಲುತ್ತಾನೆ1 ಅರಸು 16:9–10
    ವಚನಗಳು
    1 ಅರಸು 16:9–10ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು. ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
  • ಬೆನ್ಹದದನೂ 32 ಮಂದಿ ಅರಸರೂ ಮಧ್ಯಾಹ್ನದಲ್ಲಿ ತಮ್ಮ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಾರೆ1 ಅರಸು 20:16
    ವಚನಗಳು
    1 ಅರಸು 20:16ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
  • ದ್ರಾಕ್ಷಾರಸದಿಂದ ಉಲ್ಲಾಸಗೊಂಡ ಅಹಷ್ವೇರೋಷನು ರಾಣಿಯಾದ ವಷ್ಟಿಯನ್ನು ಕರೆಯಿಸುತ್ತಾನೆಎಸ್ತೇ 1:10–11
    ವಚನಗಳು
    ಎಸ್ತೇ 1:10–11ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ, “ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
  • ಬೇಲ್ಶಚ್ಚರನು ಯೆರೂಸಲೇಮಿನ ದೇವಾಲಯದ ಪಾತ್ರೆಗಳಲ್ಲಿ ಕುಡಿಯುತ್ತಾನೆದಾನಿ 5:1–4
    ವಚನಗಳು
    ದಾನಿ 5:1–4ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.

ತಪ್ಪಾಗಿ ಕುಡುಕರೆಂದು ಭಾವಿಸಲ್ಪಟ್ಟವರು

  • ಮೌನವಾಗಿ ಪ್ರಾರ್ಥಿಸುತ್ತಿದ್ದ ಹನ್ನಳನ್ನು ಏಲಿಯು ಅಮಲೇರಿದವಳೆಂದು ಭಾವಿಸುತ್ತಾನೆ1 ಸಮು 1:13–15
    ವಚನಗಳು
    1 ಸಮು 1:13–15ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು. ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
  • ಯೇಸುವನ್ನು “ಹೊಟ್ಟೆಬಾಕನು ಕುಡುಕನು” ಎಂದು ಕರೆಯುತ್ತಾರೆಮತ್ತಾ 11:19
    ವಚನಗಳು
    ಮತ್ತಾ 11:19ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
  • ಪಂಚಾಶತ್ತಮ ದಿನದಲ್ಲಿ: ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಕೆಲವರು ಹಾಸ್ಯಮಾಡುತ್ತಾರೆಅ. ಕೃ 2:13–15
    ವಚನಗಳು
    ಅ. ಕೃ 2:13–15ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು. ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು