ಅನ್ವೇಷಿಸಿ › ವಿಷಯಗಳು › ಹದ್ದುಗಳು
ಪ್ರಕೃತಿ
ಬೈಬಲಿನಲ್ಲಿ ಹದ್ದುಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 20 ವಾಕ್ಯಭಾಗಗಳು, ಸಾಲು ಸಾಲಾಗಿ.
- ಇಸ್ರಾಯೇಲರು ತಿನ್ನಬಾರದ ಪಕ್ಷಿಗಳಲ್ಲಿ ಹದ್ದು ಒಂದುಯಾಜ 11:13, ಧರ್ಮೋ 14:12
ವಚನಗಳು
ಯಾಜ 11:13“‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
ಧರ್ಮೋ 14:12ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ,
- ಹದ್ದು ಕಡಿದಾದ ಬಂಡೆಯ ಮೇಲೆ ಎತ್ತರದಲ್ಲಿ ತನ್ನ ಗೂಡನ್ನು ಕಟ್ಟುತ್ತದೆಯೋಬ 39:27–28
ವಚನಗಳು
ಯೋಬ 39:27–28ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ? ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು.
- ಅಲ್ಲಿಂದ ಅದು ಆಹಾರವನ್ನು ಹುಡುಕುತ್ತದೆ; ಅದರ ಕಣ್ಣುಗಳು ದೂರದಿಂದಲೇ ಅದನ್ನು ಕಾಣುತ್ತವೆಯೋಬ 39:29
ವಚನಗಳು
ಯೋಬ 39:29ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.
- ಅದರ ಮರಿಗಳು ರಕ್ತವನ್ನು ಹೀರುತ್ತವೆ; ಹತರಾದವರು ಎಲ್ಲಿರುವರೋ ಅಲ್ಲಿ ಅದು ಇರುತ್ತದೆಯೋಬ 39:30
ವಚನಗಳು
ಯೋಬ 39:30ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;
- ಹದ್ದು ತನ್ನ ಗೂಡನ್ನು ಕೆದರಿ ತನ್ನ ಮರಿಗಳ ಮೇಲೆ ರೆಕ್ಕೆ ಬಡಿಯುತ್ತದೆಧರ್ಮೋ 32:11
ವಚನಗಳು
ಧರ್ಮೋ 32:11ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
- ಹದ್ದು ತನ್ನ ಬೇಟೆಯ ಮೇಲೆ ಎರಗುತ್ತದೆಯೋಬ 9:26, ಯೆರೆ 49:22
ವಚನಗಳು
ಯೋಬ 9:26ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.
ಯೆರೆ 49:22ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
- “ಆಕಾಶದಲ್ಲಿ ಹದ್ದಿನ ಹಾದಿ” — ಅತ್ಯಾಶ್ಚರ್ಯವಾದ ನಾಲ್ಕು ವಿಷಯಗಳಲ್ಲಿ ಒಂದುಜ್ಞಾನೋ 30:18–19
ವಚನಗಳು
ಜ್ಞಾನೋ 30:18–19ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು; ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
ನುಡಿಗಳು
- ಹದ್ದುಗಳಿಗಿಂತ ವೇಗವುಳ್ಳವರು: ಸೌಲಯೋನಾತಾನರು, ಹಿಂದಟ್ಟುವವರು, ಕುದುರೆಗಳು2 ಸಮು 1:23, ಪ್ರಲಾ 4:19, ಯೆರೆ 4:13
ವಚನಗಳು
2 ಸಮು 1:23ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
ಪ್ರಲಾ 4:19ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
ಯೆರೆ 4:13ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
- ಸೀನಾಯಿಯಲ್ಲಿ: ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ “ನಾನು ನಿಮ್ಮನ್ನು ಹೊತ್ತುಕೊಂಡು”ವಿಮೋ 19:4
ವಚನಗಳು
ವಿಮೋ 19:4‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
- ಹದ್ದಿನಂತೆ ಎರಗುವ ದೂರದ ಜನಾಂಗಧರ್ಮೋ 28:49
ವಚನಗಳು
ಧರ್ಮೋ 28:49ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
- ಶೋಕದಲ್ಲಿ: “ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ”ಮೀಕ 1:16
ವಚನಗಳು
ಮೀಕ 1:16ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.
- ಐಶ್ವರ್ಯವು “ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ”ಜ್ಞಾನೋ 23:5
ವಚನಗಳು
ಜ್ಞಾನೋ 23:5ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
- “ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ”ಕೀರ್ತ 103:5
ವಚನಗಳು
ಕೀರ್ತ 103:5ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
- “ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು”ಯೆಶಾ 40:31
ವಚನಗಳು
ಯೆಶಾ 40:31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
- “ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ”ಯೆರೆ 49:16, ಓಬ 1:4
ವಚನಗಳು
ಯೆರೆ 49:16ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
ಓಬ 1:4ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು